ಹೈಕೋರ್ಟ್ 
ಜಿಲ್ಲಾ ಸುದ್ದಿ

ಪ್ರಾಣಿ ಬಲಿ ತಡೆಗೆ ಹೈಕೋರ್ಟ್ ಸೂಚನೆ

ನಗರದ ಮಿನರ್ವ ವೃತ್ತ ಸಮೀಪದ ಮಾವಳ್ಳಿಯ ಬಿಸಿಲು ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆಯಲಿರುವ ಹಬ್ಬದ ವೇಳೆ ನಡೆಯಲಿರುವ ಪ್ರಾಣಿ...

ಬೆಂಗಳೂರು: ನಗರದ ಮಿನರ್ವ ವೃತ್ತ ಸಮೀಪದ ಮಾವಳ್ಳಿಯ ಬಿಸಿಲು ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆಯಲಿರುವ ಹಬ್ಬದ ವೇಳೆ ನಡೆಯಲಿರುವ ಪ್ರಾಣಿ ಬಲಿಯನ್ನು ತಡೆಯಬೇಕು ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಹಬ್ಬದ ಹಿನ್ನಲೆಯಲ್ಲಿ ನಗರದ ಬಿಸಿಲು ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ಕುರಿ, ಕೋಳಿ, ದೇವಸ್ಥಾನದಲ್ಲಿ ಮಂಗಳವಾರ ಕುರಿ, ಕೋಳಿ, ಆಡುಹೋ, ಟಗರು, ಹುಂಜ ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಬಲಿ ನಡೆಸಲು ಸಿದ್ಧತೆ ನಡೆಸಲಾಗಿದೆ.

ಇದು ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ-1959ರ ಉಲ್ಲಂಘನೆಯಾಗಿದೆ. ಹೀಗಾಗಿ ಪ್ರಾಣಿ ಬಲಿಯನ್ನು ತಡೆಯಲು ಗೃಹ ಇಲಾಖೆಗೆ ಆದೇಶಿಸಬೇಕು ಎಂದು ಕೋರಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠವು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಅರ್ಜಿದಾರ ಸಂಸ್ಥೆಯ ಮನವಿಯ ಹಾಗೂ ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ಕಾಯ್ದೆ -195ರ ನಿಯಮಗಳನ್ನು ಪರಿಗಣಿಸಬೇಕು. ರಾಜ್ಯದಲ್ಲಿ ಪ್ರಾಣಿ ಬಲಿ ತಡೆಯುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾ ನಕ್ಕೆ ತರಬೇಕು ಎಂದು ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT