ಕರ್ನಾಟಕ ಹೈ ಕೋರ್ಟ್ 
ಜಿಲ್ಲಾ ಸುದ್ದಿ

ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿ ಪ್ರಶ್ನಿಸಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ...

ಬಿಬಿಎಂಪಿ ಮೀಸಲು ವಿವಾದ: ನೀವು ನೀಡಿರುವ ಆದೇಶದಲ್ಲಿ ಒಂದು ಪೂರ್ಣ, ಅರ್ಧ ವಿರಾಮದ ಚಿಹ್ನೆ ಬದಲಾಯಿಸುವುದೂ ಈಗ ಕಷ್ಟ

ಬೆಂಗಳೂರು:  ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿ ಪ್ರಶ್ನಿಸಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಿ.ಕೆ. ರಾಮಮೂರ್ತಿ ಮತ್ತು ಇತರರು ಸಲ್ಲಿಸಿದ್ದ ಮೂಲ ಅರ್ಜಿಯ ಮೇಲಿನ ಆದೇಶದಲ್ಲಿ ಮೀಸಲು ನಿಗದಿ ಅಂಶಕ್ಕೆ ತಿದ್ದುಪಡಿ ಮಾಡಬೇಕೆಂದು ಸರ್ಕಾರ ಮಧ್ಯಂತರ ಅರ್ಜಿ ದಾಖಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ಪೀಠ, ತಾವು ನೀಡಿರುವ ಆದೇಶದಲ್ಲಿ ಒಂದು ಪೂರ್ಣ ಅಥವಾ ಅರ್ಧ ವಿರಾಮದ ಚಿಹ್ನೆಯನ್ನು ಬದಲಾ ಯಿಸುವುದಕ್ಕೂ ಈಗ ಕಷ್ಟ ಸಾಧ್ಯ. ಈ ವಿಷಯದಲ್ಲಿ ನೀವು ವೃಥಾ ಕಾಲಹರಣ ಮಾಡುತ್ತಿದ್ದೀರಿ ಎಂದು ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಏತನ್ಮಧ್ಯೆ, ಈ ಮಧ್ಯಂತರ ಅರ್ಜಿಯಲ್ಲಿ ತಮ್ಮನ್ನೂ ಸೇರಿಸಿಕೊಳ್ಳುವಂತೆ ವಿವಿಧ ಸಂಘ ಸಂಸ್ಥೆಗಳು ಮತ್ತು ಪಾಲಿಕೆಯ ಮಾಜಿ ಸದಸ್ಯರು ಹೈಕೋರ್ಟ್‍ನಲ್ಲಿ ಮನವಿ ಮಾಡಿದ್ದಾರೆ. ಸರ್ಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನ, ಸಂಸದ ರಾಜೀವ್ ಚಂದ್ರಶೇಖರ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗ ಮತ್ತು ಪಾಲಿಕೆಯ ಮಾಜಿ ಸದಸ್ಯರು ತಮ್ಮನ್ನು ಸೇರಿಸಿಕೊಳ್ಳುವಂತೆ ಕೋರಿದ್ದಾರೆ. ಸಂಸದ ರಾಜೀವ್ ಚಂದ್ರಶೇಖರ್ ಪರ ಹಿರಿಯ ವಕೀಲ ಸಜ್ಜನ್ ಪೂವಯ್ಯ ವಾದ ಮಂಡಿಸಿ, 2011ರ ಜನಗಣತಿ ಆಧರಿಸಿ ವಾರ್ಡ್ ಮರು ವಿಂಗಣೆ ಮಾಡಲು ಮತ್ತು ಮೀಸಲು ಪಟ್ಟಿ ನಿಗದಿಪಡಿಸಲು

ಈ ಪೀಠ ಅನುಮತಿ ನೀಡಬೇಕು ಎಂದು ಸರ್ಕಾರ ಮಧ್ಯಂತರ ಅರ್ಜಿ ದಾಖಲಿಸಿದೆ. ಇಂತಹ ಪ್ರಕರಣದಲ್ಲಿ ಪುನರ್ ವಿಂಗಡಣೆ ಮತ್ತು ಮೀಸಲು ಪಟ್ಟಿಗೆ ಸಂಬಂ„ಸಿದಂತೆ ಹೈಕೋರ್ಟ್ ತೀರ್ಪು ನೀಡದ ಮೇಲೆ ಅದನ್ನು ಮಾರ್ಪಡಿಸಲು ಬರುವುದಿಲ್ಲ. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅಲ್ಲಿಯೂ ಸಹ ಏಕಸದಸ್ಯ ಪೀಠ ನೀಡಿದ್ದ ಆದೇಶ ಎತ್ತಿ ಹಿಡಿದಿದ್ದು, ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸುವಂತೆ ತೀರ್ಪು ನೀಡಿದೆ. ಅದರಂತೆ ಏಕಸದಸ್ಯ ಪೀಠ 2001ರ ಜನಗಣತಿ ಆಧಾರಿಸಿಯೇ ಚುನಾವಣೆ ನಡೆಸಬೇಕು ಎಂದು ಆದೇಶಿಸಿದೆ. ಆದ್ದರಿಂದ ಸದ್ಯ ತಲೆಯೆತ್ತಿರುವ ವಿವಾದವನ್ನು ಸುಪ್ರೀಂ ಕೋರ್ಟ್ ನಲ್ಲಿ  ಬಗೆಹರಿಸಿಕೊಳ್ಳಬೇಕೆ ಹೊರೆತು ಈ ಪೀಠ ಒಮ್ಮೆ ನೀಡಿರುವ ಆದೇಶ ಮಾರ್ಪಾಡು ಪಡಿಸಲು ಅವಕಾಶವಿಲ್ಲ. ಅಲ್ಲದೇ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿಯೂ ಸಹ ತಾವು ಅರ್ಜಿ ದಾಖಲಿಸಿದ್ದು, ವಾದ ಮಂಡಿಸಿದ್ದೇವೆ. ಆದ್ದರಿಂದ ತಮ್ಮ ಅರ್ಜಿ ಪರಿಗಣಿಸುವಂತೆ ಪೀಠಕ್ಕೆ ಮನವಿ ಮಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಈ ಅರ್ಜಿಯಲ್ಲಿ ನೀವು ಯಾವತ್ತೂ ಭಾಗಿದಾರರಾಗಿಯೇ ಇಲ್ಲ, ಅಷ್ಟಕ್ಕೂ ಈ ಪ್ರತಿವಾದಿಯಾಗಲು ನಿಮಗೆ ಇರುವ ಹಕ್ಕುದಾರಿಕೆಯಾದರೂ ಏನು? ಇದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು. ಮೂಲ ಅರ್ಜಿದಾರರ ಪರ ವಕೀಲರಾದ ಎ.ವಿ.ನಿಶಾಂತ್ ವಾದ ಮಂಡಿಸಿ, ಈಗಾಗಲೇ ಸುಪ್ರೀಂ ಕೋರ್ಟ್ ಈ ಏಕಸದಸ್ಯ ಪೀಠದ ಆದೇಶವನ್ನು ತನ್ನ ತೀರ್ಪಿನೊಳಗೆ ವಿಲೀನಗೊಳಿಸಿಕೊಂಡಿದೆ. ಹೀಗಿರುವಾಗ ಸರ್ಕಾರ ಈ ಮಧ್ಯಂತರ ಅರ್ಜಿ ಸಲ್ಲಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ನಿಶಾಂತ್ ಅವರು ಸರ್ಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಬಯಸಿದ ಕಾರಣ ಪೀಠವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು. ನ್ಯಾ.ನಾಗರತ್ನ ಅವರ ಏಕಸದಸ್ಯ ಪೀಠದ ಆದೇಶದಲ್ಲಿ 2001ರ ಜನಗಣತಿ ಪ್ರಕಾರ ಸಿದ್ಧಪಡಿಸಿದ ಮೀಸಲು ಪಟ್ಟಿಯನ್ನು ಪರಿಗಣಿಸುವಂತೆ ಸೂಚಿಸಿರುವುದು ಸರಿಯಲ್ಲ. 2011ರ ಜನಗಣತಿ ಅನ್ವಯವೇ ಮೀಸಲು ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಕೋರಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗವು ನ್ಯಾಯಮೂರ್ತಿ ಆರ್.ಎಸ್. ಚೌಹಾಣ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕಳೆದ ವಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿದ್ದ ಚೌಹಾಣ್ ಅವರು, ಮೂಲ ಅರ್ಜಿಯಲ್ಲಿ  ಈ ಸಂಬಂಧ ನ್ಯಾ.ನಾಗರತ್ನ ಅವರ ಪೀಠದಲ್ಲೇ ತಿದ್ದುಪಡಿ ಮಾಡಿಸಿಕೊಳ್ಳಿ ಎಂಬ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಅನುಸಾರ ಸರ್ಕಾರ ಮಂಗಳವಾರ ನ್ಯಾ. ನಾಗರತ್ನ ಅವರ ಏಕಸದಸ್ಯ ಪೀಠದ ಮುಂದೆ ಈ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ