ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ 
ಜಿಲ್ಲಾ ಸುದ್ದಿ

ಸರಗಳ್ಳರ ಪತ್ತೆಗೆ ವಿಶೇಷ ತಂಡ

ಸರಣಿ ಸರಗಳ್ಳತನ ಆರೋಪಿಗಳ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದ್ದು, ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ಶುಕ್ರವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಿತು...

ಬೆಂಗಳೂರು: ಸರಣಿ ಸರಗಳ್ಳತನ ಆರೋಪಿಗಳ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದ್ದು, ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ಶುಕ್ರವಾರ
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಿತು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ, ಗುರುವಾರ ನಗರದ ವಿವಿಧೆಡೆ ಸರಗಳ್ಳತನ ನಡೆಸಿರುವ ಗ್ಯಾಂಗ್‍ನ ಖಚಿತ ಮಾಹಿತಿ ಲಭ್ಯವಾಗಿದೆ. ರಾಜ್ಯ ಗುಪ್ತಚರ ಘಟಕ ಸೇರಿದಂತೆ ನೆರೆಯ ಮಹಾರಾಷ್ಟ್ರ ರಾಜ್ಯ ಪೊಲೀಸರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಕೇಂದ್ರಅಪರಾಧ ವಿಭಾಗ(ಸಿಸಿಬಿ) ಹಾಗೂ ನಗರ ಪೊಲೀಸರು ಪೊಲೀಸರ ಜಂಟಿಯಾಗಿ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳ ಬಂಧನದ ವಿಶ್ವಾಸವಿದೆ ಎಂದು ಹೇಳಿದರು.

ಸರಗಳ್ಳತನ ನಿಯಂತ್ರಣಕ್ಕೆ ನಗರದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ. ಅದಕ್ಕಾಗಿ ಗುಣಮಟ್ಟದ ಕಾರ್ಯಾಚರಣೆ ಪ್ರಕ್ರಿಯೆ(ಎಸ್‍ಓಪಿ) ಪ್ರಕಾರ ನಾಕಾಬಂದಿ ರಚನೆ, ಹಾಗೂ ಗಸ್ತು ನಡೆಸುವಂತೆ ಸೂಚನೆ ನೀಡಲಾಗಿದೆ. ಸರಗಳ್ಳತನ ನಡೆಯುವ ಹಾಗೂ ನಡೆಯಬಹುದಾದ ಆಯಾಕಟ್ಟಿನ ಪ್ರದೇಶಗಳಲ್ಲಿ ವಿಶೇಷವಾಗಿ ಭದ್ರತೆ ಹೆಚ್ಚಳ ಹಾಗೂ ಗಸ್ತು ತಿರುಗುವಂತೆ ಸೂಚನೆ ನೀಡಲಾಗಿದೆ ಎಂದು ರೆಡ್ಡಿ ತಿಳಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗದ ಡಿಸಿಪಿಗಳು ಭಾಗವಹಿಸಿದ್ದರು.

ಒಂದೇ ಗ್ಯಾಂಗ್:

ಸರಗಳ್ಳತನ ಕೃತ್ಯದಲ್ಲಿ ಎರಡು ಮಾದರಿ ಇದೆ. ಮೊದಲನೇ ಮಾದರಿಗೆ ಉದಾಹರಣೆ ಸ್ಥಳೀಯ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಕೆಲವರು ನಡೆಸುವ ವಿಧಾನ. ಇವರು ನಗರದ ಒಂದು ಅಥವಾ ಎರಡು ಕಡೆ ಕಾರ್ಯಾಚರಣೆ ನಡೆಸಿ ಪರಾರಿಯಾಗುತ್ತಾರೆ. ಮತ್ತೊಂದು ಮಾದರಿಯನ್ನು ಮಹಾರಾಷ್ಟ್ರದ ಮುಂಬೈ, ಪುಣೆ, ಕರ್ನಾಟಕದ ಬೆಳಗಾವಿಯ ಕೆಲ ತಂಡಗಳು ಅನುಸರಿಸುತ್ತವೆ.

ಇರಾನಿ ಗ್ಯಾಂಗ್ ಜೊತೆ ಆಗಮಿಸುವ ಈ ತಂಡಗಳು ಒಂದೇ ದಿನದಲ್ಲಿ ನಗರದ ಆಯಟ್ಟಿನ ಪ್ರದೇಶಗಳಲ್ಲಿ 5ರಿಂದ ಹತ್ತು ಕಡೆ ಸರ ಕಿತ್ತುಕೊಂಡು ಪರಾರಿಯಾಗುತ್ತವೆ. ಕೆಲವೊಮ್ಮೆ ಈ ಗ್ಯಾಂಗ್ ನಗರದಲ್ಲೇ ಬೀಡು ಬಿಟ್ಟಿರುತ್ತದೆ. ಎರಡನೇ ಮಾದರಿಯ ತಂಡವೇ ಗುರುವಾರ ನಗರದಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆದರೂ, ನಾವು ಎಲ್ಲಾ ಕೋನಗಳಲ್ಲೂ ಪರಿಶೀಲನೆ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದರು. ಸರಗಳ್ಳತನ ನಿಯಂತ್ರಣಕ್ಕೆ ಕ್ರಮಗಳು: ನಗರದಲ್ಲಿ ಸರಗಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಈಗಾಗಲೇ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆರಂಭಿಸಲಾಗಿದೆ. ಸರಗಳ್ಳತನದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT