ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ 
ಜಿಲ್ಲಾ ಸುದ್ದಿ

ಅಲ್ಲಮನನ್ನು ಮರೆತ ಸರ್ಕಾರ: ಶಾಂತವೀರ ಸ್ವಾಮೀಜಿ

ಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು...

ಬೆಂಗಳೂರು: ಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ಕೊಳದಮಠದ ಆವರಣದಲ್ಲಿ ಏರ್ಪಡಿಸಿದ್ದ `ಅಲ್ಲಮಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಕೈಗೊಂಡ ವಚನ ಕ್ರಾಂತಿಗೆ ಅಲ್ಲಮರೇ ಅಡಿಪಾಯ ಹಾಕಿದವರು. ಆದರೂ ಅವರ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ನೀಡುತ್ತಿಲ್ಲ. ಹೀಗಾಗಿ ಅಲ್ಲಮಶ್ರೀ ಪ್ರಶಸ್ತಿಯನ್ನು ಸ್ಥಾಪಿಸಿ, ಅದನ್ನು ಬ್ಯಾಹ್ಯಾಕಾಶ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಅವರಿಗೆ ನೀಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‍ನ ಹಿರಿಯ ಮುಖಂಡ ಬೂಟಾಸಿಂಗ್ ಮಾತನಾಡಿ, ಸನಾತನ ಧರ್ಮ, ಸಿಖ್‍ಧರ್ಮ ಒಳಗೊಂಡಂತೆ ಎಲ್ಲಾ ಧರ್ಮಗಳೂ ಸಂತರನ್ನು ಕುರಿತು ಪೂಜ್ಯ ಭಾವನೆ ಹೊಂದಿವೆ. ವಿಶ್ವಶಾಂತಿಗಾಗಿ ಸರ್ವಧರ್ಮ ಸಮ್ಮೇಳನ ನಡೆಯಬೇಕಾಗಿದೆ. ನಾನು ಮೊದಲು ಧಾರ್ಮಿಕ ನಂಬಿಕೆಯುಳ್ಳವ, ನಂತರ ರಾಜಕಾರಣಿ ಎಂದರು. ಶಾಸಕ ಹ್ಯಾರಿಸ್ ಮಾತನಾಡಿ, ಭಾರತೀಯರೆಲ್ಲಾ ಒಂದಾದರೆ ದೇಶ ಕ್ಷಿಪ್ರ ಬೆಳವಣಿಗೆ ಕಾಣುತ್ತದೆ. ಆದರೆ, ನಮ್ಮ ನಡುವೆಯೇ ಹೋರಾಟ ನಡೆಯುತ್ತಿರುವುದರಿಂದ ಇದು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.

ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್ ಅನುಪಸ್ಥಿತಿಯಲ್ಲಿ `ಅಲ್ಲಮಶ್ರೀ ಪ್ರಶಸ್ತಿ' ಪ್ರದಾನ ಮಾಡಲಾಯಿತು. ನಿವೃತ್ತ ಅಧಿಕಾರಿ ಡಾ. ಸಿ. ಸೋಮಶೇಖರ್, ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಂ. ಮಹದೇವಪ್ಪ, ಮಹದೇವ ಹೊರಟ್ಟಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT