ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಸದಸ್ಯರು 
ಜಿಲ್ಲಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಕರ್ನಾಟಕದ ಗೃಹ ಕಾರ್ಮಿಕರ ಪ್ರತಿಭಟನೆ

ಗೃಹ ಕಾರ್ಮಿಕರನ್ನು ಅಂತರಾಷ್ಟ್ರೀಯ ಕಾರ್ಮಿಕರ ಸಂಸ್ಥೆಗೆ ಸೇರ್ಪಡೆಗೊಳಿಸುವ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ...

ಬೆಂಗಳೂರು: ಗೃಹ ಕಾರ್ಮಿಕರನ್ನು ಅಂತರಾಷ್ಟ್ರೀಯ ಕಾರ್ಮಿಕರ ಸಂಸ್ಥೆಗೆ ಸೇರ್ಪಡೆಗೊಳಿಸುವ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಮತ್ತು ಕರ್ನಾಟಕ ಗೃಹ ಕಾರ್ಮಿಕರ ಚಳುವಳಿಯ ಸದಸ್ಯರು ನಾಳೆ ಧರಣಿ ಹಮ್ಮಿಕೊಂಡಿದ್ದಾರೆ.

ಗೃಹ ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆ ಒದಗಿಸುವ ಕಾನೂನು ರಚಿಸಬೇಕು ಹಾಗೂ ಕನಿಷ್ಠ ವೇತನವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ನಾಳೆ ಮಧ್ಯಾಹ್ನ 2.30ಕ್ಕೆ ಪುರಭವನದ ಮುಂಭಾಗ ಧರಣಿ ಹಮ್ಮಿ ಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆಯ ಕಾರ್ಯದರ್ಶಿ ಲಲಿತಾ ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಕಾರ್ಮಿಕರ ಸಂಸ್ಥೆಯ ಕಾರ್ಮಿಕರ ಯೋಗ್ಯ ಕೆಲಸಕ್ಕೆ ಸಂಬಂಧಿಸಿದ ಒಪ್ಪಂದ 189ಕ್ಕೆ ಭಾರತ ಅನುಮೋದನೆ ನೀಡಬೇಕು. ಗೃಹ ಕಾರ್ಮಿಕರಿಗೆ ವಾರದ ರಜೆ, ನಿಗದಿತ ವೇತನ, ಆರೋಗ್ಯ ಯೋಜನೆ, ವಸತಿ, ಪಿಎಫ್, ಇಎಸ್ಐ ಮತ್ತಿತರ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಗೃಹ ಕಾರ್ಮಿಕರಿಗೆ ಬಿಪಿಎಲ್ ಪಡಿತರ ಚೀಟಿ ವಿತರಿಸಬೇಕು. ಗೃಹ ಕಾರ್ಮಿಕರಿಗೆ ಅತಿ ಶೀಘ್ರದಲ್ಲಿ ಅಸಂಘಟಿತ ಕಾರ್ಮಿಕರ ಗುರುತಿನ ಚೀಟಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT