ವೈದ್ಯರಿಲ್ಲದೆ ರೋಗಿಗಳ ಪರದಾಟ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸೂಲಿಬೆಲೆ: ವೈದ್ಯರಿಲ್ಲದೆ ರೋಗಿಗಳ ಪರದಾಟ

ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 15 ದಿನಗಳಿಂದ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಕರ್ತವ್ಯ ನಿರ್ವಹಿಸುವ ನರ್ಸ್‍ಗಳೇ ರೋಗಿಗಳ ಪಾಲಿಗೆ ತಾತ್ಕಾಲಿಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ...

ಸೂಲಿಬೆಲೆ: ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 15 ದಿನಗಳಿಂದ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಕರ್ತವ್ಯ ನಿರ್ವಹಿಸುವ ನರ್ಸ್‍ಗಳೇ
ರೋಗಿಗಳ ಪಾಲಿಗೆ ತಾತ್ಕಾಲಿಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಯಿ ಕಾರ್ಡು, ಜನನಿ ಸುರಕ್ಷೆಯಂತ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ದಾಖಲೆಗಳಿಗೆ ವೈದ್ಯರ ಸಹಿ ಇಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತುರ್ತು ಚಿಕಿತ್ಸೆಗೆ ವೈದ್ಯರಿಲ್ಲದ
ಪರಿಣಾಮ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ. ಹೊಸಕೋಟೆ ತಾಲೂಕಿನ ಅತಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಸೂಲಿಬೆಲೆಯಲ್ಲಿ ಆರು ಹಾಸಿಗೆಗಳನ್ನು ಹೊಂದಿರುವ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಇಲ್ಲಿ ನಿತ್ಯ 100 ರಿಂದ 150 ಮಂದಿ ರೋಗಿಗಳು ಚಿಕಿತ್ಸೆಗಾಗಿ ನಾನಾ ಕಡೆಯಿಂದ ಬರುತ್ತಾರೆ.

ಈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ 32 ಹಳ್ಳಿಗಳು ಒಳಪಟ್ಟಿದ್ದು, 35378 ಜನಸಂಖ್ಯೆ ಹೊಂದಿದೆ. ಈ ಆಸ್ಪತ್ರೆ ವ್ಯಾಪ್ತಿಯಲ್ಲಿ 7385 ಕುಟುಂಬಗಳಿವೆ. 5 ಗ್ರಾ.ಪಂಗಳನ್ನು ಒಳಗೊಂಡಿದೆ. ಇಷ್ಟು ವಿಶಾಲ ವ್ಯಾಪ್ತಿಯನ್ನು ಹೊಂದಿರುವ ಆರೋಗ್ಯ ಕೇಂದ್ರದಲ್ಲಿ ಕಳೆದ 15 ದಿನಗಳಿಂದ ವೈದ್ಯರಿಲ್ಲ. ಕಳೆದ ಒಂದು ವರ್ಷದಿಂದ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ವೈದ್ಯರು ತಮ್ಮ ಗುತ್ತಿಗೆ ಅವಧಿ ಮುಗಿದ ಕಾರಣ ಮೇ 30ರಿಂದ ಕೆಲಸಕ್ಕೆ ಹಾಜರಾಗುತ್ತಿಲ್ಲ. 24 ಗಂಟೆ ಹೆರಿಗೆ ಸೌಲಭ್ಯ ಇರುವ ಕೇಂದ್ರದಲ್ಲಿ ಎನ್‍ಆರ್‍ಹೆಚ್‍ಎಂ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನರ್ಸ್‍ಗಳೇ ಆಸ್ಪತ್ರೆಗೆ ಬರುವ ರೋಗಿಗಳನ್ನು ನಿಭಾಯಿಸುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!