ಹಳಿ ತಪ್ಪಿದ ಬೆಂಗಳೂರು-ಚೆನ್ನೈ ರೈಲು
ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ಮುಂಜಾನೆ ನಡೆದಿರುವುದಾಗಿ ತಿಳಿದುಬಂದಿದೆ...
ಬೆಂಗಳೂರು: ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ಮುಂಜಾನೆ ನಡೆದಿರುವುದಾಗಿ ತಿಳಿದುಬಂದಿದೆ.
ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ರೈಲು ಅಪಘಾತ ಸಂಭವಿಸಿದ್ದು, ಇಂದು ಬೆಳಿಗ್ಗೆ 4.25ರ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ ರೈಲಿನ ಮೊದಲ ಮತ್ತು ಎರಡನೇ ಎಸಿ ಬೋಗಿಗಳು ಅಪಘಾತಕ್ಕೀಡಾಗಿದ್ದು ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.