ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ 
ಜಿಲ್ಲಾ ಸುದ್ದಿ

ಬಿಬಿಎಂಪಿ ಅಂಗಳಕ್ಕೆ ಮಂತ್ರಿ ಮಾಲ್ ವಿವಾದ

ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ಬೈಲಾ ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ...


ಬೆಂಗಳೂರು : ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ಬೈಲಾ ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳ ವಾದ ಮತ್ತು ಆಕ್ಷೇಪಣೆಗಳನ್ನು ಆಲಿಸಿ ಸೂಕ್ತ ಆದೇಶ ಹೊರಡಿಸುವಂತೆ ಬೃಹತ್ ಬೆಂಗಳೂರು ಮಹಾನಗರ
ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ. ನಗರದಲ್ಲಿರುವ ಮಂತ್ರಿ ಮಾಲ್ ಕಟ್ಟಡ ಬೈಲಾಗಳನ್ನು ಉಲ್ಲಂಘಿಸಿದ್ದು, ತಪ್ಪಿತಸ್ಥ ಅಧಿಕಾರಿ ಮತ್ತು ಮಂತ್ರಿ ಡೆವಲಪರ್ಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಧವನೇಶನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ. ಮುಖರ್ಜಿ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಬೈಲಾ ಉಲ್ಲಂಘನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ಹಂತದಲ್ಲಿ ಮಧ್ಯೆ ಪ್ರವೇಶಿಸಲು ಸಾಧ್ಯವಿಲ್ಲ. ಈ ಕುರಿತು  ಅರ್ಜಿದಾರರ ಮತ್ತು ಪ್ರತಿವಾದಿಗಳು ವಾದವನ್ನು ಕೂಲಂಕುಷವಾಗಿ ಪರಿಗಣಿಸಿ ಸೂತ್ಕ ಆದೇಶ ಹೊರಡಿಸುವಂತೆ  ಬಿಬಿಎಂಪಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ. ಕೆರೆಗೆ ಸೇರಿದ್ದ ಒಂದು ಎಕರೆ ಜಾಗದಲ್ಲಿ ಮಾಲ್ ನಿರ್ಮಿಸಿರುವ ಮಂತ್ರಿ ಸಂಸ್ಥೆ ಇದಕ್ಕಾಗಿ ಕಟ್ಟಡದ ಬೈಲಾ ಉಲ್ಲಂಘಿಸಿದೆ. ಪಾಲಿಕೆ ಮತ್ತು ನಗಾರಾಭಿವೃದ್ಧಿ ಇಲಾಖೆ ಮಂಜೂರು ಮಾಡಿದ್ದ ನಕ್ಷೆ ಕೂಡ ಮಂತ್ರಿ ಸಂಸ್ಥೆ ಉಲ್ಲಂಘಿಸಿದೆ. ಅವಶ್ಯವಿರುವ ಪಾರ್ಕಿಂಗ್ ಸೌಲಭ್ಯವನ್ನು ಸಹ ಕಲ್ಪಿಸದೆ ಕಾನೂನುಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಿದೆ. ವಾಸ್ತವ ಅರಿತು ಕೊಳ್ಳದೇ ನಗರಾಭಿವೃದ್ಧಿ ಜಂಟಿ ನಿರ್ದೇಶರು ಮಾಲ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಮಾಲ್‍ನಿಂದ ಟ್ರಾಫಿಕ್ ಕಿರಿಕಿರಿ: ಈ ಮಧ್ಯೆ ವಕೀಲ ಎನ್.ಪಿ. ಅಮೃತೇಶ್ ಎಂಬುವರು ಮಂತ್ರಿ ಮಾಲ್‍ನಿಂದ ಟ್ರಾಫಿಕ್ ಸಮಸ್ಯೆ ಉದ್ಭವಿಸಿದ್ದು ಅದಕ್ಕೆ ಸೂಕ್ತ ಪರಿಹಾರ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸ್ದಿದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಸಂಬಂಧಪಟ್ಟ ಆಯುಕ್ತರಿಗೆ ಮನವಿ ನೀಡಿ. ಅವರು ಸಮಸ್ಯೆ ಬಗೆಹರಿಸಲು ವಿಫಲವಾದಲ್ಲಿ ಹೈಕೋರ್ಟ್‍ಗೆ ಅರ್ಜಿ ದಾಖಲಿಸಿ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಅಮೃತೇಶ್ ವಾದ ಮಂಡಿಸಿ, ಮಲ್ಲೇಶ್ವರದ ಪೊಲೀಸ್ ಠಾಣೆಯನ್ನು ಮಂತ್ರಿ ಡೆವಲಪರ್ಸ್ ಸಂಸ್ಥೆಯ ನಿರ್ಮಾಣ ಮಾಡಿದೆ. ಆದ
ಕಾರಣ ಅವರ ವಿರುದ್ಧ ಪೊಲೀಸರು ಮಂತ್ರಿ ಡೆವಲೆಪರ್ಸ್ ಸಂಸ್ಥೆ ವಿರುದ ಯಾವುದೇ ಕ್ರಮ ಜರುಗಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT