ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ 
ಜಿಲ್ಲಾ ಸುದ್ದಿ

ಸ್ಲಂ ನಿವಾಸಿಗಳಿಂದ ಅಪರಾಧ ಹೆಚ್ಚಳ: ಎಂಎನ್ ರೆಡ್ಡಿ

ಬೆಂಗಳೂರಿನ ವಿವಿಧ ಸ್ಲ ಗಳಲ್ಲಿರುವ ನಿವಾಸಿಗಳಿಂದ ಹೆಚ್ಚಿನ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಅವುಗಳನ್ನು ತ‌ಡೆಗಟ್ಟುವ ಉದ್ದೇಶದಿಂದ ಖಾಸಗಿ...

ಬೆಂಗಳೂರು: ಬೆಂಗಳೂರಿನ ವಿವಿಧ ಸ್ಲ ಗಳಲ್ಲಿರುವ ನಿವಾಸಿಗಳಿಂದ ಹೆಚ್ಚಿನ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಅವುಗಳನ್ನು ತ‌ಡೆಗಟ್ಟುವ ಉದ್ದೇಶದಿಂದ ಖಾಸಗಿ ಸಂಸ್ಥೆಗಳೊಂದಿಗೆ ಸೇರಿ ಸ್ಲಂ ದತ್ತು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಸ್ಲಂಗಳಲ್ಲಿ ವಾಸಿಸುವ ಯುವಕರು ನಿರುದ್ಯೋಗದ ಕಾರಣದಿಂದ ಅಪರಾಧ ಪ್ರಕರಣಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಅವರಿಗೆ ಉದ್ಯೋಗ ನೀಡುವುದು, ಕೌಶಲ್ಯ ತರಬೇತಿ ನೀಡುವುದು ಸೇರಿದಂತೆ ಅವರನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಬೆಂಗಳೂರು ಪೂರ್ವವಲಯದಲ್ಲಿ 30 ಸ್ಲಂಗಳನ್ನು ಗುರುತಿಸಿ ಅಲ್ಲಿನ ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಮೇಲೆ ನಿಗಾವಹಿಸುವಂತೆ ಹಾಗೂ ಅವರು ಅಪರಾಧದಲ್ಲಿ ತೊಡಗಲು ಕಾರಣ ಪತ್ತೆಹಚ್ಚುವ ಕಾರ್ಯ ಅಧಿಕಾರಿಗಳಿಂದ ನಡೆಯುತ್ತಿದೆ. ಇದೊಂದು ಹೊಸ ಪ್ರಯೋಗವಾಗಿದ್ದು, ನಗರದ ಎಲ್ಲಾ ಪ್ರದೇಶಗಳಲ್ಲೂ ಇದೇ ರೀತಿಯ ಪ್ರಯೋಗ ನಡೆಸಲು ಇಲಾಖೆ ಚಿಂತನೆ ನಡೆಸಿದೆ" ಎಂದು ಹೇಳಿದರು.

ಅಲ್ಲದೆ ಈ ಬಗ್ಗೆ ಯುವ ಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಸೇರಿ ಕಾರ್ಯಕ್ರಮ ರೂಪಿಸಿ ಜಾರಿಗೆ ತರಲು ಪ್ರಯತ್ನಿಸಲಾಗುವುದು. ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚಿ ಅವರಿಂದ ವಸ್ತುಗಳನ್ನು ವಶಪಡಿಸಿಕೊಳ್ಳುವುದು ಉತ್ತಮ ಕೆಲಸವಾಗಿದ್ದರೂ ಅಪರಾಧದ ಮೂಲವನ್ನು ಪತ್ತೆಹಚ್ಚಿ ಅದು ನಡೆಯದಂತೆ ತಡೆಯುವುದೂ ಕೂಡ ಉತ್ತಮ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಇಲಾಖೆ ಕಾರ್ಯತಂತ್ರ ರೂಪಿಸುತ್ತಿದೆ ಎಂದು ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.

ಇನ್ನು "ನಗರದಲ್ಲಿ ನಡೆಯುವ ಅಪರಾಧ ಪ್ರಕರಣಗಳ ಪೈಕಿ ಶೇ. 40ಕ್ಕಿಂತ ಹೆಚ್ಚು ಆಗ್ನೇಯ ವಿಭಾಗದಲ್ಲಿ ನಡೆಯುತ್ತಿದೆ. ಇದಕ್ಕೆ ಇಲ್ಲಿನ ಐಟಿ ಉದ್ಯಮವೂ ಒಂದು ಕಾರಣವಾಗಿರಬಹುದು. ಡಿಸಿಪಿ ರೋಹಿಣಿ ಕಟೋಚ್ ಅವರ ನೇತೃತ್ವದ ತಂಡ ಕಳೆದ ಒಂದು ವರ್ಷದಿಂದ ಸತತವಾಗಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪ್ರಯತ್ನಿಸುತ್ತಿದೆ ಎಂದು ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದರು.

ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆ
ಇನ್ನು ನಗರದಲ್ಲಿ ಹೆಚ್ಚಿರುವ ಸರಗಳ್ಳರ ಹಾವಳಿ ಕುರಿತಂತೆ ಮಾತನಾಡಿದ ಆಯುಕ್ತ ಎಂಎನ್ ರೆಡ್ಡಿ ಅವರು, ಸತತವಾಗಿ ಸರಗಳ್ಳತನ ಮತ್ತು ಅಪರಾಧ ಪ್ರಕರಣಗಳಲ್ಲಿ ಭಾಗವಹಿಸುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಎಂ.ಎನ್. ರೆಡ್ಡಿ ತಿಳಿಸಿದರು.

ಇದೇ ವೇಳೆ ವಿವಿಧ ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಆಯುಕ್ತ ಎಂಎನ್ ರೆಡ್ಡಿ ಪ್ರಶಂಸನಾ ಪತ್ರ ವಿಧಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!