ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಖುರೇಷಿ, ಜಿಗಣಿ ಶಂಕರ್ ಮತ್ತಿತರರು ಹಾಜಿರಿದ್ದರು. 
ಜಿಲ್ಲಾ ಸುದ್ದಿ

ಅಂಬೇಡ್ಕರ್ ಮೊಮ್ಮಗನ ಮೇಲೆ ಹಲ್ಲೆ ಖಂಡಿಸಿ ದಲಿತರ ಪ್ರತಿಭಟನೆ

ಮಹಾರಾಷ್ಟ್ರ ರಾಯಗಡ್ ಬಳಿ ಇರುವ ಮಹಡ್ ನಗರದಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಹಲ್ಲೆ ಖಂಡಿಸಿ...

ಬೆಂಗಳೂರು: ಮಹಾರಾಷ್ಟ್ರ ರಾಯಗಡ್ ಬಳಿ ಇರುವ ಮಹಡ್ ನಗರದಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಹಲ್ಲೆ ಖಂಡಿಸಿ ರಾಜ್ಯದ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ ಜಿಗಣಿ ಶಂಕರ್, ದಲಿತರ ಮೇಲಿನ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ದೇಶದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕುಟಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದೆ. ಬಿಜೆಪಿ ಮತ್ತು ಶಿವಸೇನಾ ನಿರಂತರವಾಗಿ ದಲಿತರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಶಿವಸೇನೆ ಶಾಸಕ ಗೋಕಲೆ ಮತ್ತು ವಿಕಾಸ್ ಗೋಕಲೆ ಅವರು ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು, ಅಲ್ಲಿನ ಮಹರಾಷ್ಟ್ರ ಸರ್ಕಾರ ಯಾವುದೇ ರೀತಿಯ ಕ್ರಮಕೈಗೊಳ್ಳದಿರುವುದು ವಿಷಾಧನೀಯ ಎಂದ ಅವರು ಈ ಹಲ್ಲೆಯನ್ನು ಖಂಡಿಸಿ ರಿಪಬ್ಲಿಕ್ ಸೇನೆ, ಕರ್ನಾಟಕ ಜನಾಂದೋಲನ ಸಂಘಟನೆ, ಕರ್ನಾಟಕ ಸಂರಕ್ಷಣಾ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ ಎಂದಿದ್ದಾರೆ.

ಜುಲೈ 6ರಂದು ವಿವಿಧ ಸಂಘಟನೆಗಳ ವತಿಯಿಂದ ಅಂಬೇಡ್ಕರ್ ಕುಟುಂಬದ ಮೇಲಿನ ಹಲ್ಲೆಯನ್ನು ಖಂಡಿಸಿ ಹೋಸಕೋಟೆ ತಾಲ್ಲೂಕು ತಹಸೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT