ಮಾದಕ ವಸ್ತು: ಇಬ್ಬರ ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮಾದಕ ವಸ್ತು: ಇಬ್ಬರ ಬಂಧನ

ಮಾದಕವಸ್ತು ಎಂಡಿ ಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.15 ಲಕ್ಷ ಮೌಲ್ಯದ 100 ಗ್ರಾಂ ಪೌಡರ್ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಮಾದಕವಸ್ತು ಎಂಡಿ ಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.15 ಲಕ್ಷ ಮೌಲ್ಯದ 100 ಗ್ರಾಂ ಪೌಡರ್ ವಶಪಡಿಸಿಕೊಂಡಿದ್ದಾರೆ.

ಕೇರಳದ ತಿರುವನಂತಪುರದ ರಾಮ್ಸ್ ಮೋನ್ (27) ಹಾಗೂ ವೈನಾಡಿನ ಹಜಿನಾಸ್ (23) ಬಂಧಿತರು. ಆರೋಪಿಗಳು ಮಡಿವಾಳ ತಾವರೆಕೆರೆ ಸ್ವರಾಜ್ ಹೈಪರ್ ಮಾರುಕಟ್ಟೆ ಮುಂಭಾಗದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇವರಿಂದ ಮಾದಕ ವಸ್ತು ಜತೆಗೆ ರು.2300 ನಗದು, 1 ಬೈಕ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನಲ್ಲಿರುವ ಮಹಮ್ಮದ್ ಅಲಿ ಎಂಬಾತನಿಂದ ಎಂಡಿಎಂಎ ಪೌಡರ್ ಖರೀದಿಸಿ ನಗರಕ್ಕೆ ತರುತ್ತಿದ್ದ ಆರೋಪಿಗಳು, 1 ಗ್ರಾಂ ಹಾಗೂ ಅರ್ಧ ಗ್ರಾಂ ತೂಕದ ಸಣ್ಣ ಸಣ್ಣ ಪ್ಯಾಕೆಟ್ ಮಾಡಿ 1 ಪ್ಯಾಕೆಟ್‍ಗೆ ರು.10ರಿಂದ ರು.15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೆಚ್ಚಾಗಿ ನಗರದ ಐಟಿ ಬಿಟಿ ಕಚೇರಿಗಳು. ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ