ಬೆಳಗಾವಿಗೆ ಕೆಎಟಿ ಭಾಗ್ಯ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೆಳಗಾವಿಗೆ ಕೆಎಟಿ ಭಾಗ್ಯ

ಬೆಳಗಾವಿಯಲ್ಲಿ ಆಡಳಿತ ನ್ಯಾಯಮಂಡಳಿ ಸ್ಥಾಪಿಸಬೇಕೆಂಬ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಬೆಳಗಾವಿಯಲ್ಲಿ ಹೆಚ್ಚುವರಿ ಕೆಎಟಿ ಪೀಠ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನ ಕೈಗೊಂಡಿದೆ...

ಬೆಂಗಳೂರು: ಬೆಳಗಾವಿಯಲ್ಲಿ ಆಡಳಿತ ನ್ಯಾಯಮಂಡಳಿ ಸ್ಥಾಪಿಸಬೇಕೆಂಬ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಬೆಳಗಾವಿಯಲ್ಲಿ ಹೆಚ್ಚುವರಿ ಕೆಎಟಿ ಪೀಠ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನ ಕೈಗೊಂಡಿದೆ.

ಬೆಂಗಳೂರಿನಲ್ಲಿ ಕೆಎಟಿ 3 ಪೀಠಗಳಿದ್ದು, ಇಲ್ಲಿ 29,920 ಪ್ರಕರಣಗಳು ಬಾಕಿ ಇವೆ. ಇದರಿಂದ ಕೇಸುಗಳು ಇತ್ಯರ್ಥವಾಗುತ್ತಿಲ್ಲ. ಹಾಗೆಯೇ ಇರುವ ಪೀಠಗಳಿಗೂ ಒತ್ತಡ ಹೆಚ್ಚಾಗುತ್ತಿದೆ. ಆದ್ದರಿಂದ ಕೇಸುಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಬೇಕು. ಹಾಗೆಯೇ ಮೂರೂ ಪೀಠಗಳ ಮೇಲಿರುವ ಒತ್ತಡವನ್ನು ಕಡಿಮೆ ಮಾಡಬೇಕೆಂದು ಬೆಳಗಾವಿಯಲ್ಲಿ ಕೆಎಟಿ ಹೆಚ್ಚುವರಿ ಪೀಠ ಸ್ಥಾಪಿಸಬೇಕೆನ್ನುವ ಪ್ರಸ್ತಾಪವನ್ನು ಅನುಮೋದಿಸಲಾಗಿದೆ. ಈ ಮೂಲಕ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು. ಈ ಹೆಚ್ಚುವರಿ ಪೀಠ ಸ್ಥಾಪನೆಯಿಂದ ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಗಳಿಗೆ ಅನುಕೂಲವಾಗಲಿದ್ದು, ಇಲ್ಲಿ ಈತನಕ ಸುಮಾರು 6,793 ಕೇಸುಗಳು ಬಾಕಿ ಉಳಿದಿವೆ. ಇವುಗಳನ್ನು ತ್ವರಿತವಾಗಿ ಇತ್ಯಾರ್ಥಗೊಳಿಸಲು ಇದು ನೆರವಾಗಲಿದೆ ಎಂದು ಅವರು ವಿವರಿಸಿದರು.

ಟಿಡಿಆರ್ ದರ ಹೆಚ್ಚಳ
ಬೆಂಗಳೂರು ನಗರದಲ್ಲಿ ಟಿಡಿಆರ್ ಸಮಸ್ಯೆಗಳಿಂದ ರಸ್ತೆ ಅಗಲೀಕರಣ ಕಾಮಗಾರಿಗಳು ವಿಳಂಬವಾಗುತ್ತಿರುವುದನ್ನು ತಡೆಯಲು ಟಿಡಿಆರ್ ದರ ಹೆಚ್ಚಿಸಲಾಗಿದೆ.
ಅಂದರೆ ರಸ್ತೆ ಅಗಲೀಕರಣಕ್ಕೆ 100 ಅಡಿ ಜಾಗ ನೀಡಿದ ಆಸ್ತಿ ಮಾಲೀಕರಿಗೆ 250 ಅಡಿ ಅಳತೆಗೆ ಟಿಡಿಆರ್ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಈವರೆಗೂ 100 ಅಡಿ ಜಾಗಕ್ಕೆ 150 ಅಡಿ ಟಿಡಿಆರ್ ಸಿಗುತ್ತಿತ್ತು. ಇದಕ್ಕೆ ಹೆಚ್ಚಿನ ಜನ ಮುಂದೆ ಬರುತ್ತಿಲ್ಲ. ಇದರಿಂದ ರಸ್ತೆ ಅಗಲೀಕರಣ ಕಾಮಗಾರಿಗಳು ಹಿಂದುಳಿದಿದ್ದವು. ಇದನ್ನು ತಪ್ಪಿಸಲು ಈಗ ಟಿಡಿಆರ್ ನೀಡುವ ದರವನ್ನು ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT