ವಿದ್ಯಾರ್ಥಿನಿ ಜತೆ ಅಸಭ್ಯವರ್ತನೆ: ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಿದ್ಯಾರ್ಥಿನಿ ಜತೆ ಅಸಭ್ಯವರ್ತನೆ: ಬಂಧನ

ವೈದ್ಯಕೀಯ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ರಾತ್ರಿ ಮತ್ತಿಕೆರೆಯಲ್ಲಿ ನಡೆದಿದೆ...

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ರಾತ್ರಿ ಮತ್ತಿಕೆರೆಯಲ್ಲಿ ನಡೆದಿದೆ.

ನೇಪಾಳ ಮೂಲದ ಸಾಮ್ರಾಟ್ ಸಿಂಗ್ (21) ಬಂಧಿತ. 3 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಶ್ರೀರಾಂಪುರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಪತ್ನಿ ಜತೆ ಶ್ರೀರಾಂಪುರದಲ್ಲೇ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮತ್ತಿಕೆರೆಯಲ್ಲಿನ ಸ್ನೇಹಿತನ ಮನೆಗೆ ಹೋಗಿದ್ದ ಸಾಮ್ರಾಟ್ ಸಿಂಗ್, ಮದ್ಯಪಾನ ಮಾಡಿ ಹೊರಗೆ ಬಂದಿದ್ದಾನೆ. ರಾತ್ರಿ 10ರ ಸುಮಾರಿಗೆ ರಾಮಯ್ಯ ಕಾಲೇಜು ಸಮೀಪದ ಪೈಪ್‍ಲೈನ್ ರಸ್ತೆಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಊಟಕ್ಕೆ ಸಮೀಪದ ರೆಸ್ಟೋರೆಂಟ್‍ಗೆ ಹೋಗುತ್ತಿದ್ದರು.

ಆಕೆಯನ್ನು ಅಡ್ಡಗಟ್ಟಿದ ಆರೋಪಿ, ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದ. ಭೀತಿಗೊಂಡ ಯುವತಿ ತಪ್ಪಿಸಿಕೊಂಡು ಓಡಿದರೂ ಹಿಂದೆ ಬಂದು ತಬ್ಬಿಕೊಳ್ಳಲು ಯತ್ನಿಸಿದ್ದ. ಆರೋಪಿ ಕಪಾಳಕ್ಕೆ ಹೊಡೆದ ಯುವತಿ ಕಿರುಚಿದ್ದಾಳೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದ. ಬೆನ್ನತ್ತಿ ಹಿಡಿದ ಸಾರ್ವಜನಿಕರು ಥಳಿಸಿ ಸದಾಶಿವನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್‍ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT