ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಮತದಾರರಾಗಲು ಇದು ಕೊನೆ ಅವಕಾಶ!

ರಾಜ್ಯ ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ. ಪಟ್ಟಿಯ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ...

ಬಿಬಿಎಂಪಿ
Vishwanath S
Updated On : 25 Jun 2015, 12:56 pm

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ. ಪಟ್ಟಿಯ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ 71,22,165ಮಂದಿ ಮತದಾರರಿದ್ದಾರೆ. ಈಗ ಬಿಬಿಎಂಪಿ ಚುನಾನವಣೆ ನಡೆಸಬೇಕಿರುವುದರಿಂದ ಆಯೋಗ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕಾಗುತ್ತದೆ.

ಈ ಕೆಲಸವನ್ನು ಬಿಬಿಎಂಪಿ ಕಂದಾಯ ವಿಭಾಗಕ್ಕೆ ವಹಿಸಲಾಗುತ್ತಿದ್ದು, ಅದು ಸದ್ಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭಿಸಲಿದೆ. ನಿಯಮದ ಪ್ರಕಾರ ಚುನಾವಣಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆದಿನದ ವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತದೆ. ಅಂದರೆ ಅಂದರೆ ನಾಮಪತ್ರ ಸಲ್ಲಿಸುವ ಕೊನೆ ದಿನದ ವರೆಗೂ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.

ಆನಂತರ ಮತದಾನ ಕೆಲವು ದಿನಗಳಿವೆ ಎನ್ನುವ ಸಮಯಕ್ಕೆ ಮತದಾರರರಿಗೆ ಗುರುತಿನ ಚೀಟಿ ಸಿಗುತ್ತದೆ. ಇದು ಮತದಾರರಾಗ ಬಯಸುವವರಿಗೆ ಮಾತ್ರ ಅನುಕೂಲ. ಅಭ್ಯರ್ಥಿಯಾಗಬಯಸುವವರು ಈ ಮಾದರಿಯಲ್ಲಿ ಅರ್ಜಿ ಸಲ್ಲಿಸಿ ಮತದಾರರ ಗುರುತಿನ ಚೀಟಿ ಪಡೆಯುವುದಕ್ಕೆ ಅವಕಾಶವಿಲ್ಲ ಎಂದು ಆಯೋಗ ಕಾರ್ಯದರ್ಶಿ ಎಸ್.ಹೊನ್ನಾಂಬ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement