ಕರ್ನಾಟಕ ಹೈ ಕೋರ್ಟ್ 
ಜಿಲ್ಲಾ ಸುದ್ದಿ

ಚಲನಚಿತ್ರ ನಿರ್ದೇಶಕ ಸಂಘದ ಕಾರ್ಯಕಾರಿಣಿ ಚುನಾವಣೆಗೆ ತಡೆ

ಕರ್ನಾಟಕ ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜುಲೈ 12ರಂದು ನಡೆಸಲು ಉದ್ದೇಶಿಸಿದ್ದ ಚುನಾವಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ...

ಬೆಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜುಲೈ 12ರಂದು ನಡೆಸಲು ಉದ್ದೇಶಿಸಿದ್ದ ಚುನಾವಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಸಂಘದ ಅಧ್ಯಕ್ಷ ಪಿ.ಎಚ್.ವಿಶ್ವನಾಥ್ ನೇತೃತ್ವದ ತುರ್ತು ಸಭೆ ಕೈಗೊಂಡಿದ್ದ ನಿರ್ಣಯ ಪ್ರಶ್ನಿಸಿ, ಸಂಘದ ಪ್ರಧಾನ ಕಾರ್ಯದರ್ಶಿ ಟೇಶಿ ವೆಂಕಟೇಶ್ ಮತ್ತಿತರ ಪಾದಾಧಿಕಾರಿಗಳು ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ಎ.ಎಸ್.ಬೋಪಣ್ಣ ಅವರು ಚುನಾವಣೆಗೆ ತಡೆ ನೀಡಿ ವಿಚಾರಣೆ ಮುಂದೂಡಿದೆ.

ಸಂಘದ ಮಾಸಿಕ ಸಭೆ ಕರೆಯಲು ಮತ್ತು ಸಮರ್ಪಕವಾಗಿ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ವಿಫಲವಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಪಿ.ಎಚ್. ವಿಶ್ವನಾಥ್ ಅವರ ವಿರುದ್ಧ ಕಾರ್ಯಕಾರಿ ಸಮಿತಿಯ 13 ಮಂದಿ ಅವಿಶ್ವಾಸ ನಿರ್ಣಯ ಕೈಗೊಂಡಿದ್ದರು. ಜತೆಗೆ, ಅಧ್ಯಕ್ಷ ಸ್ಥಾನದಿಂದ ಕೆಳಗಿಯಲು ಒತ್ತಾಯಿಸಿ ಮಾ.5ರಂದು ನಿರ್ಣಯ ಕೈಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT