ಬೆಂಗಳೂರು: ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಸ್ಪರ್ಧಿಸುವ ಆಕಾಂಕ್ಷಿಗಳಿಗಾಗಿ ಅರ್ಜಿ ವಿತರಣೆ ಕಾರ್ಯಕ್ಕೆ ಶುಕ್ರವಾರ ಮಧ್ಯಾಹ್ನ 3 ಗಂಟೆಯ ನಂತರ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಚಾಲನೆ ನೀಡಲಾಗಿದೆ. ಹಿಂದುಳಿದ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಬಿಲ್ಡಿಂಗ್ ಫಂಡ್ ಎಂದು ಪ್ರೆಸಿಡೆಂಟ್ ಕೆಪಿಸಿಸಿ ಹೆಸರಿನಲ್ಲಿ ರು.10,000 ಮೊತ್ತದ ಡಿಡಿ ಸಲ್ಲಿಸಬೇಕು.
ಪರಿಶಿಷ್ಟ ಜಾತಿ, ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು ಇದೇ ವಿಳಾಸಕ್ಕೆ ರು.5,000 ಡಿಡಿ ಸಲ್ಲಿಸಬೇಕು. ಜುಲೈ 7ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ದಿನೇಶ್ ಗೂಳಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.