ಇಸ್ಪೀಟ್: ಸಂಸದ ಪ್ರತಾಪ ಸಿಂಹ ಸಹೋದರನ ಬಂಧನ
ಸ್ನೇಹಿತರೊಂದಿಗೆ ಇಸ್ಪೀಟ್ ಆಡುತ್ತಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಸೇರಿ 9 ಮಂದಿಯನ್ನು ಶುಕ್ರವಾರ ರಾತ್ರಿ ಪೊಲೀಸರು...
ಹಾಸನ: ಸ್ನೇಹಿತರೊಂದಿಗೆ ಇಸ್ಪೀಟ್ ಆಡುತ್ತಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಸೇರಿ 9 ಮಂದಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ವಿಕ್ರಂ ಅವರು ಸಕಲೇಶಪುರ ತಾಲೂಕಿನ ಬಿರಡಹಳ್ಳಿಯ ಮನೆಯೊಂದರಲ್ಲಿ ಇಸ್ಪೀಟ್ ಆಡುತ್ತಿದ್ದರು. ಖಚಿತ ಮಾಹಿತಿಯನ್ನು ಆಧರಿಸಿ ಡಿವೈಎಸ್ಸಿ ಪಿ.ವಿ.ಸ್ನೇಹಾ ಅವರು ಸಿಬ್ಬಂದಿ ಜತೆ ದಾಳಿ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 14 ಸಾವಿರ ರುಪಾಯಿ ನಗದು ಹಾಗೂ 14 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಕ್ರಂ ಸಿಂಹಗೆ ಜಾಮೀನು: ಜೂಜಾಡುಚ್ಚಿದ್ದ ವೇಳೆ ನಿನ್ನೆ ಬಂಧನಕ್ಕೊಳಗಾಗಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಶನಿವಾರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.