ಮನನೊಂದ ರೈತ( ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸಾವಿನ ವೈಭವಕ್ಕಿಂತ ವಿಶ್ವಾಸ ತುಂಬಬೇಕು

ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬೇಕಾದರೆ ರೈತರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಆಗಬೇಕಿದೆ ಎಂದು ಮನೋವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ದೇಶದ ಬೆನ್ನೆಲುಬು ಎಂದೇ ಖ್ಯಾತಿ ಪಡೆದಿರುವ ರೈತ ಸಂಕಷ್ಟಗಳ ಸೇರೆಮಾಲೆಗೆ ಸಿಲುಕಿದ್ದು ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ದುರಂತಗಳು ಸಂಭವಿಸುತ್ತಿವೆ. ಇಂತಹ ಪ್ರಕರಣಗಳು ಇತರೆ ರೈತರ ಆತ್ಮಸ್ಥೈರ್ಯವನ್ನು ಕುಂದಿಸುತ್ತಿದೆ.

ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬೇಕಾದರೆ ರೈತರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಆಗಬೇಕಿದೆ ಎಂದು ಮನೋವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕೆಗಳು ಅದರಲ್ಲಿಯೂ ವಿಶೇಷವಾಗಿ ಎಲೆಕ್ಟ್ರಾನಿಕ್ ಮಾಧ್ಯಮಗಳು ರೈತರ ಸಾವನ್ನು ವೈಭವೀಕರಿಸಿ ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಮನೋವೈದ್ಯರು ಸಲಹೆ ನೀಡಿದ್ದಾರೆ.

ಆತ್ಮಹತ್ಯೆಗೆ ಹಲವು ಕಾರಣ: ಸುತ್ತಮುತ್ತಲಿನ ಪರಿಸರ, ಸಂಸಾರದ ಜಂಜಾಟ ಇದೆಲ್ಲದಕ್ಕಿಂತ ಮಿಗಿಲಾಗಿ ಸಾಲ ಬಾಧೆ ಆತನನ್ನು ದಿನಂಪ್ರತಿ ಕಾಡುತ್ತಿರುತ್ತದೆ ಎಂಬುದು ಪ್ರಮುಖ ಕಾರಣ ಎನ್ನುತ್ತಾರೆ ನಿಮ್ಹಾನ್ಸ್ ನಿರ್ದೇಶಕರಾದ ಡಾ.ಸತೀಶ್ ಚಂದ್ರ. ಇದೆಲ್ಲವನ್ನೂ ತಡೆ ಹಿಡಿಯಬೇಕಾದರೆ ರೈತನಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯಬೇಕಿದೆ.

ಯಾವೊಬ್ಬ ರೈತನೂ ತಕ್ಷಣವೇ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸುವುದಿಲ್ಲ. ಆಟ ಈ ಕುರಿತು ತನ್ನ ಆಪ್ತರ ಬಳಿ ಮೊದಲು ಸುಳಿವು ನೀಡಿರುತ್ತಾನೆ. ಆಪ್ತರ ಜತೆ ತನ್ನ ಅಳಲನ್ನು ತೋಡಿಕೊಂಡ ತಕ್ಷಣವೇ ಅಂಥವರು ಎಚ್ಚೆತ್ತುಕೊಂಡು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳುವುದರಿಂದ ಈ ರೀತಿಯ ಘಟನೆಗಳನ್ನು ತಡೆಹಿಡಿಯಬಹುದು ಎನ್ನುತ್ತಾರೆ ಡಾ.ಸತೀಶ್ ಚಂದ್ರ. ಆತ್ಮಹತ್ಯೆ ಪರಿಹಾರವಲ್ಲ, ನಿಮ್ಮೊಂದಿಗೆ ಸರ್ಕಾರ ಇದೆ. ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ರೈತರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT