ಮೃತ ಓಬಳರೆಡ್ಡಿ 
ಜಿಲ್ಲಾ ಸುದ್ದಿ

ಅಪಘಾತ: ನವದಂಪತಿ ಸಾವು

ಮಹಾದೇವಪುರ ಹೊರ ವರ್ತುಲ ರಸ್ತೆ ಬಿ. ನಾರಾಯಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಮೃತಪಟ್ಟಿದ್ದಾರೆ.

ಬೆಂಗಳೂರು: ಮಹಾದೇವಪುರ ಹೊರ ವರ್ತುಲ ರಸ್ತೆ ಬಿ. ನಾರಾಯಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಮೃತಪಟ್ಟಿದ್ದಾರೆ.

22 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಆಂಧ್ರಪ್ರದೇಶ ಮೂಲದ ಎಂಜಿನಿಯರ್ ಓಬಳರೆಡ್ಡಿ(27) ಮತ್ತು ಆತನ ಪತ್ನಿ ಸಾಫ್ಟ್‌ವೇರ್ ಎಂಜಿನಿಯರ್ ಉಮಾ(24) ಮೃತಪಟ್ಟ ದಂಪತಿಗಳು.

ಬಾಣಸವಾಡಿಯಲ್ಲಿ ವಾಸವಿದ್ದ ಈ ದಂಪತಿಗಳು ನಿನ್ನೆ ಸಂಜೆ ಸಂಬಂಧಿಗಳನ್ನು ಭೇಟಿ ಮಾಡಿ ವಾಪಸ್ ಮನೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ರಿಂಗ್ ರಸ್ತೆ ರಾಯಲ್ ಎನ್‌ಫೀಲ್ಡ್ ಶೋರೂಮ್ ಮುಂಬಾಗ ಹೋಗುತ್ತಿದ್ದಾಗ ಗಲಿಬಿಲಿಗೊಂಡ ಓಬಳರೆಡ್ಡಿ ಅವರ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇಬ್ಬರು ಕೆಳಗೆ ಬಿದ್ದಾಗ ಹಿಂದಿನಿಂದ ಬರುತ್ತಿದ್ದ ಲಾರಿ ಕೆಳಗೆ ಬಿದ್ದವರ ಮೇಲೆ ಹರಿದಿದ್ದು, ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಲಾರಿ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT