ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರು, ಸಂಸದರು, ಶಾಸಕರು ಮತ್ತು ಅಧಿಕಾರಿಗಳು ಹಾಜರಿದ್ದರು. 
ಜಿಲ್ಲಾ ಸುದ್ದಿ

ಆತ್ಮಹತ್ಯೆ ಪರಿಹಾರ ಮೊತ್ತ ಹೆಚ್ಚಳವಿಲ್ಲ: ಸಿಎಂ ಸ್ಪಷ್ಟೋಕ್ತಿ

ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ...

ಮೈಸೂರು: ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಎಚ್.ಡಿ.ಕೋಟೆ ತಾಲ್ಲೂಕು ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಸರ್ಕಾರವೇ ಪ್ರಚೋದನೆ ನೀಡಿದಂತೆ ಆಗುತ್ತದೆ. ಆದ್ದರಿಂದ ಹಾಲಿ ಇರುವ ನಿಯಮಾವಳಿಯಂತೆ 1 ಲಕ್ಷ ರೂಪಾಯಿ ಮಾತ್ರ ಪರಿಹಾರ ನೀಡಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಈ ಹಿಂದೆ ಯಾವತ್ತಾದ್ರೂ ಪಾದಯಾತ್ರೆ ಮಾಡಿದ್ರಾ? ಈಗ ರಾಜಕಾರಣ ಮಾಡುತ್ತಿದ್ದಾರೆ. ನಾವು ಬಳ್ಳಾರಿ ಪಾದಯಾತ್ರೆ ಮಾಡಿದ್ದು ರಾಜಕೀಯ ಲಾಭಕ್ಕಾಗಿ ಅಲ್ಲ. ವಿಧಾನಸಭೆಯಲ್ಲಿಯೇ ರೆಡ್ಡಿಗಳು ಬಳ್ಳಾರಿಗೆ ಬರುವಂತೆ ಸವಾಲು ಹಾಕಿದ್ದರಿಂದ ಅದನ್ನು ಸ್ವೀಕರಿಸಿ, ಅಲ್ಲಿಗೆ ಪಾದಯಾತ್ರೆ ಹೋದೆವು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ಈಗ ಸಿಬಿಐ ಬಗ್ಗೆ ಮಾತಾಡುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಥವಾ ಬಿಜೆಪಿ ಅಧಿಕಾರದಲ್ಲಿದ್ದಾಗ ಯೂವುದಾದರೂ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದರೇ? ನಾವು ಈವರೆಗೆ ಆರು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇವೆ. ಒಂದಂಕಿ ಲಾಟರಿ ಅಕ್ರಮವನ್ನು ಕೂಡ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಅವರು ಹೇಳಿದರು.

ಮೂರು ವರ್ಷದಲ್ಲಿ ಪೂರ್ಣ:
ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ