ಕೃಷ್ಣರಾಜಪುರ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚಾರವೆಸಗಿ ವಂಚಿಸಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೊಂಡನಹಳ್ಳಿಯಲ್ಲಿ ನಡೆದಿದೆ.
ಆವಲಹಳ್ಳಿ ಸಮೀಪದ ನಾಗೊಂಡನಹಳ್ಳಿಯಲ್ಲಿ ವಾಸವಾಗಿರುವ 17 ವರ್ಷದ ಅಪ್ರಾಪ್ತೆಯನ್ನು ವೈಟ್ ಫೀಲ್ಡ್ ನ ಇಮ್ಮಡಿಹಳ್ಳಿಯ ನಿವಾಸಿ ಪ್ರವೀಣ್ ಕುಮಾರ್ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕುಡಿಯುವ ನೀರು ಸರಬರಾಜು ಮಾಡುವ ನೆಪದಲ್ಲಿ ಸಂತ್ರಸ್ತೆಯ ಮನೆಗೆ ಆಗಾಗ ಬರುತ್ತಿದ್ದ ಆರೋಪಿ, ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ಈ ವಿಷಯ ತಾಯಿಗೆ ಗೊತ್ತಾಗಿ ಬೈದು ಬುದ್ದಿ ಹೇಳಿದ್ದರು. ಆದರೆ, ಪಾಲಕರ ಗಮನಕ್ಕೆ ಬಾರದೇ ಬಾಲಕಿಯನ್ನು ಹೊರಗಡೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ. ಆರೋಪಿ ಪ್ರವೀಣನಿಗೆ ಈಗಾಗಲೇ ಮದುವೆ ಆಗಿದೆ. ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ವೈಟ್ ಫೀಲ್ಡ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.