ಅಪಘಾತ 
ಜಿಲ್ಲಾ ಸುದ್ದಿ

ಕಿಲ್ಲರ್ ವಾಹನಗಳಿಗೆ ಬಲಿಯಾಯ್ತು ಇಬ್ಬರ ಜೀವ

ಬೆಂಗಳೂರು: ಬಿಎಂಟಿಸಿ ಬಸ್ ಮತ್ತು ಬಿಬಿಎಂಪಿ ದೈತ್ಯ ಕಸದ ಲಾರಿಗಳು ಯಮಸ್ವರೂಪಿಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಗರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಈ ವಾಹನಗಳು ಇಬ್ಬರನ್ನು ಬಲಿ ತೆಗೆದುಕೊಂಡಿವೆ.

ವರ್ತೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಸದ ಲಾರಿ ಡಿಕ್ಕಿ ಹೊಡೆದು ಎಂಬಿಎ ವಿದ್ಯಾರ್ಥಿನಿ ರಮ್ಯಾ (22) ಮೃತಪಟ್ಟಿದ್ದಾರೆ. ಸ್ನೇಹಿತೆ ಪವಿತ್ರಾ ದ್ವಿಚಕ್ರ ವಾಹನದಲ್ಲಿ ರಮ್ಯಾ ಕಾಲೇಜಿಗೆ ತೆರಳುತ್ತಿದ್ದರು. ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಹೊತ್ತೊಯ್ದರು. ಅಷ್ಟರಲ್ಲಾಗಲೇ ರಮ್ಯಾ ಮೃತಪಟ್ಟಿದ್ದರು.

ಮಾಣೆಕ್‍ಷಾ ಪರೇಡ್ ಮೈದಾನದ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ತ್ರಿಶೂಲ್ (27) ಮೃತಪಟ್ಟಿದ್ದಾರೆ. ಶಿವಾಜಿನಗರ ಆಸ್ಮಾನ್ ರಸ್ತೆ ನಿವಾಸಿ ತ್ರಿಶೂಲ್, ಆಟೊಮೊಬೈಲ್ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದರು. ಬಿಆರ್ವಿ ಜಂಕ್ಷನ್ ಕಡೆಯಿಂದ ಕಬ್ಬನ್ ರಸ್ತೆ ಕಡೆ ತೆರಳುತ್ತಿದ್ದಾಗ ಹೊಸಕೋಟೆ ಕಡೆಯಿಂದ ಶಿವಾಜಿನಗರಕ್ಕೆ ಬರುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಸವಾರ ಸ್ಥಳದಲ್ಲೇ ಮೃತಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?