ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯರು 
ಜಿಲ್ಲಾ ಸುದ್ದಿ

ಸರಣಿ ಪ್ರತಿಭಟನೆ, ಸವಾರರ ಪರದಾಟ

ಕೆಲ ತಿಂಗಳ ಹಿಂದೆ ನಗರದ ಹೃದಯ ಭಾಗದ ವಾಹನ ಸವಾರರನ್ನು ತಲ್ಲಣಗೊಳಿಸಿ, ಹೈರಾಣ ಮಾಡಿದ್ದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಬೆಳಗ್ಗೆಯೂ ಮತ್ತೆ ಮೆಜೆಸ್ಟಿಕ್ ಸುತ್ತಮುತ್ತ ವಾಹನ ಸವಾರರನ್ನು ಹೈರಾಣಗೊಳಿಸಿದರು.ನಾನಾ ಬೇಡಿಕೆ...

ಬೆಂಗಳೂರು: ಕೆಲ ತಿಂಗಳ ಹಿಂದೆ ನಗರದ ಹೃದಯ ಭಾಗದ ವಾಹನ ಸವಾರರನ್ನು ತಲ್ಲಣಗೊಳಿಸಿ, ಹೈರಾಣ ಮಾಡಿದ್ದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಬೆಳಗ್ಗೆಯೂ ಮತ್ತೆ ಮೆಜೆಸ್ಟಿಕ್ ಸುತ್ತಮುತ್ತ ವಾಹನ ಸವಾರರನ್ನು ಹೈರಾಣಗೊಳಿಸಿದರು.ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದ ಸದಸ್ಯರು ಹಾಗೂ ರಾಜ್ಯ ಬಲಿಜ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಎರಡೂ ಸಂಘಟನೆಗಳ ಸದಸ್ಯರು ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ಸಾಗಿದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಫ್ರೀಡಂ ಪಾರ್ಕ್, ಆನಂದ್‍ರಾವ್ ವೃತ್ತ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಂಗನವಾಡಿ ನೌಕರರು ಸಾವಿರಾರು ಸಂಖ್ಯೆಯಲ್ಲಿ  ಆಗಮಿಸಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಗಂಟೆ ಕಾಲ ಸವಾರರು ಪರದಾಡಿದರು. ಈ ಹಿಂದೆಯೂ ಅಂಗನವಾಡಿ ನೌಕರರು ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಬೆಳಗಿನಿಂದ ಮಧ್ಯಾಹ್ನದವರೆಗೂ ಸವಾರರು ಪರದಾಡಿದ್ದರು. ಹಾಗಾಗಿ ಸಂಚಾರ ಪೊಲೀಸರು ಪ್ರತಿಭಟನಾಕಾರರನ್ನು ಪಕ್ಕಕ್ಕೆ ಸರಿಸಿ ವಾಹನ ಸವಾರರ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಫ್ರೀಡಂ ಪಾರ್ಕ್‍ನಲ್ಲಿ ವೈದ್ಯರು, ಅಂಗನವಾಡಿ ನೌಕರರು, ಬಲಿಜ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಪೊಲೀಸರು ಮುಂಜಾಗ್ರತಾ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ವಾಹನ ಸವಾರರು ಪೊಲೀಸರ ವಿರುದ್ಧ ಹರಿಹಾಯ್ದರು.

ಮಾತು ತಪ್ಪಿದ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನವಾಡಿ ನೌಕರರಿಗೆ ಕೊಟ್ಟ ಮಾತು ತಪ್ಪಿದ್ದಾರೆ. ಬಜೆಟ್‍ನಲ್ಲಿ ಕೇವಲ ರು.250 ಮತ್ತು ರು.500 ಹೆಚ್ಚಿಸಲಾಗಿದೆ. ಅಂಗನವಾಡಿ ನೌಕರರ ಮೇಲೆ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಹಾಗಾಗಿ ಸರ್ಕಾರ ಹೇಳಿದಂತೆ ನಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಾದರೂ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಬಲಿಜ ಸಂಘದ ಬೇಡಿಕೆಗಳೇನು?

ಪೂರ್ಣ ಪ್ರಮಾಣದ 2ಎ ಪ್ರವರ್ಗ ಮೀಸಲಾತಿ, ಶ್ರೀ ಯೋಗಿನಾರೇಯಣ ಅಧ್ಯಯನ ಪೀಠ ಸ್ಥಾಪನೆ, ಕೈವಾರ ತಾತಯ್ಯ ಅವರ ಜಯಂತಿ ಆಚರಣೆ, ನಿಗಮ ಮಂಡಳಿಗಳಲ್ಲಿ ಬಲಿಜ ಜನಾಂಗದವರಿಗೆ ಅವಕಾಶ, ಬಲಿಜ ಜನಾಂಗದವರಿಗೆ ವಿಶ್ವವಿದ್ಯಾಲಯ ಸ್ಥಾಪನೆಗೆ 50 ಎಕರೆ ಭೂಮಿ ಹಾಗೂ ರು.50 ಕೋಟಿ ಮಂಜೂರು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಲಿಜ ಸಂಘದ ಸದಸ್ಯರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ