ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ಬೆಂಗಳೂರು ಅಭಿವೃದ್ಧಿಗೆ ಸಹಕಾರಿಯಾಗುತ್ತಾ ಬಿಬಿಎಂಪಿ ಇಬ್ಭಾಗ? ಒಮ್ಮೆ ದೆಹಲಿಯನ್ನು ನೋಡಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡುವುದರಿಂದ ನಿಜಕ್ಕೂ ಬೆಂಗಳೂರು ಅಭಿವೃದ್ಧಿಗೆ ಸಹಕಾರಿಯಾಗುತ್ತಾ....

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದರೆ ನಿಜಕ್ಕೂ ಬಿಬಿಎಂಪಿ ವಿಭಜನೆ ಬೆಂಗಳೂರು ಅಭಿವೃದ್ಧಿಗೆ ಸಹಕಾರಿಯಾಗುತ್ತಾ ಎಂಬ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಏಕೆಂದರೆ ಮೂರು ಭಾಗಗಳಾಗಿ ವಿಭಜನೆಯಾಗಿರುವ ರಾಷ್ಟ್ರರಾಜಧಾನಿ ದೆಹಲಿಯನ್ನು ಗಮನಿಸಿದರೆ ಸಹಜವಾಗಿಯೇ ಈ ಪ್ರಶ್ನೆ ಉದ್ಭವಿಸುತ್ತದೆ. ಮೂರು ದೆಹಲಿ ಮಹಾನಗರ ಪಾಲಿಕೆಗಳ ಪೈಕಿ ಈಗ ಎರಡು ಮಹಾನಗರ ಪಾಲಿಕೆಗಳು ಆರ್ಥಿಕ ಸಂಕಷ್ಟದಲ್ಲಿವೆ.

ತಜ್ಞರ ಪ್ರಕಾರ, ಒಂದು ವೇಳೆ ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡಿದ್ದೇಯಾದರೆ, ನಮ್ಮ ಬೆಂಗಳೂರು ಸಹ ದೆಹಲಿಯ ರೀತಿ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾತನಾಡಿರುವ ಉತ್ತರ ದೆಹಲಿ ಮಹಾನಗರ ಪಾಲಿಕೆ, ದಕ್ಷಿಣ ದೆಹಲಿಯ ಮಹಾನಗರ ಪಾಲಿಕೆ ಹಾಗೂ ಪೂರ್ವ ದೆಹಲಿ ಮಹಾನಗರ ಪಾಲಿಕೆಗಳ ಮೇಯರಗಳು, ಆದಾಯದ ದೃಷ್ಟಿಯಿಂದ ದಕ್ಷಿಣ ದೆಹಲಿ ಮಾತ್ರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಮಹಾನಗರ ಪಾಲಿಕೆ ವಿಭಜನೆಗೆ ಮುನ್ನ ದೆಹಲಿ ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿತ್ತು ಎಂದು ಉತ್ತದ ದೆಹಲಿ ಮಹಾನಗರ ಪಾಲಿಕೆ ಮೇಯರ್ ಯೇಗೇಂದ್ರ ಚಂಡೋಲಿಯಾ ಅವರು ಹೇಳಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ದೆಹಲಿಯನ್ನು ಮೂರ ಭಾಗಗಳಾಗಿ ವಿಭಜನೆ ಮಾಡಲಾಯಿತು. ಆದರೆ ಕಳೆದ ಮೂರು ವರ್ಷಗಳಿಂದ ಉತ್ತರ ಮತ್ತು ಪೂರ್ವ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ನಾವು ನೇರವಾಗಿ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುತ್ತೇವೆ. ಹೀಗಾಗಿ ವಿಧಾನಸಭೆ ಚುನಾವಣೆಗೂ ಮುನ್ನ ನಾವು ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಮೂರು ಮಹಾನಗರ ಪಾಲಿಕೆಗಳನ್ನು ಮತ್ತೆ ವಿಲೀನ ಮಾಡುವಂತೆ ಒತ್ತಾಯಿಸಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ನಾವು ಶೇ.13ರ ಬಡ್ಡಿಯಲ್ಲಿ 1,400 ಕೋಟಿ ರುಪಾಯಿ ಸಾಲ ತೆಗೆದುಕೊಂಡಿದ್ದೇವೆ. ಸರಿಯಾದ ಸಮಯಕ್ಕೆ ನಮ್ಮ ಸಿಬ್ಬಂದಿಗೆ ಮತ್ತು ಪೌರ ಕಾರ್ಮಿಕರಿಗೆ ಸಂಬಳ ನೀಡುಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಯೇಗೇಂದ್ರ ಅವರು ಹೇಳುತ್ತಾರೆ.

ಇನ್ನು ದೆಹಲಿ ಮಹಾನಗರ ಪಾಲಿಕೆ ವಿಭಜನೆಯಾದ ನಂತರ ಆರ್ಥಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಪೂರ್ವ ದೆಹಲಿ ಮಹಾನಗರ ಪಾಲಿಕೆ ಮೇಯರ್ ಮೀನಾಕ್ಷಿ ಅವರು ಹೇಳಿದ್ದಾರೆ.

ಸದ್ಯ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಆದರೆ ನಾನು ಮೊದಲ ಬಾರಿಗೆ ಮಹಾನಗರ ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಿರುವುದರಿಂದ ನನಗೆ ಕಾರ್ಯನಿರ್ವಹಣೆಯ ಬಗ್ಗೆ ಇನ್ನು ಸರಿಯಾದ ಮಾಹಿತಿ ಇಲ್ಲ. ನಮ್ಮ ಖರ್ಚು ವೆಚ್ಚವನ್ನು ನಿಭಾಯಿಸಲು 3,700 ಕೋಟಿ ರುಪಾಯಿ ಬಜೆಟ್ ಮಂಡಿಸಿದ್ದೇವೆ ಎಂದು ದಕ್ಷಿಣ ದೆಹಲಿ ಮಹಾನಗರ ಪಾಲಿಕೆ ಮೇಯರ್ ಖುಷಿರಾಮ್ ಚುನಾರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT