ಬೀದರ್: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ಬುಧವಾರ ನಡೆದಿದೆ.
ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹನುಮಂತನಾಗ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.
ತೀವ್ರವಾಗಿ ಗಾಯಗೊಂಡಿರುವ ಹನುಮಂತನಾಗ ಅವರನ್ನು ಆಸ್ಪತ್ರೆಗೆ ದಾಖಲಾಗಿಸಿದ್ದು, ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.