ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾ.30) ಆರಂಭವಾಗುತ್ತಿದ್ದು, ಈ ಬಾರಿ 8,56,438 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 829 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ...

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾ.30) ಆರಂಭವಾಗುತ್ತಿದ್ದು, ಈ ಬಾರಿ 8,56,438 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 829 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

ಯಾವುದೇ ಅಹಿತಕರ ಘಟನೆ ಹಾಗೂ ಅಕ್ರಮ ಚಟುವಟಿಕೆಗಳು ನಡೆಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಚಕ್ಷಣ ದಳ ರಚಿಸಲಾಗಿದ್ದು, ರಾಜ್ಯದ ನಿರ್ದೇಶಕರು, ಸಹ ನಿರ್ದೇಶಕರು ಹಾಗೂ ಉಪನಿರ್ದೇಶಕರು ಈ ದಳದ ಜವಾಬ್ದಾರಿ ವಹಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆಯ ಎಲ್ಲ ತಾಲೂಕಿಗೆ ಡಯಟ್‍ನ ಇಬ್ಬರು ಹಿರಿಯ ಉಪನ್ಯಾಸಕರನ್ನು ವಿಚಕ್ಷಣಾ ದಳಕ್ಕೆ ನೇಮಿಸಲಾಗಿದೆ. ಈ ಜಾಗೃತ ದಳದಲ್ಲಿ ಶಿಕ್ಷಣಾಧಿಕಾರಿಗಳು ಇರುತ್ತಾರೆ. ಹಾಗೆಯೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವರು. ಈ ಮೂಲಕ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಜ್ಜಾಗಿದೆ.

ಪರೀಕ್ಷೆಗೆ ಒಟ್ಟು 13,693 ಶಾಲೆಗಳು ನೋಂದಾಯಿಸಿದ್ದು, 3038 ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ 148 ಸೂಕ್ಷ್ಮ, 50 ಅತಿಸೂಕ್ಷ್ಮಕೇಂದ್ರಗಳಾಗಿವೆ. ಇದರಲ್ಲಿ 70 ಕೇಂದ್ರಗಳು ಸಿಸಿಟಿವಿ ಹೊಂದಿವೆ. ಏ.13ಕ್ಕೆ ಪರೀಕ್ಷೆ ಅಂತ್ಯಗೊಳ್ಳಲಿದ್ದು, ಏ.19ರಿಂದ 211 ಕೇಂದ್ರದಲ್ಲಿ ಮೌಲ್ಯಮಾಪನ ನಡೆಯಲಿದೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ನಿಷಿದ್ಧ
ಪರೀಕ್ಷಾ ಕೇಂದ್ರದೊಳಕ್ಕೆ ವಿದ್ಯಾರ್ಥಿಗಳು ಮೊಬೈಲ್ ತರಬಾರದು ಎಂದು ನಿಯಮವಿದ್ದರೂ ಅದು ಕಟ್ಟುನಿಟ್ಟಾಗಿ ಜಾರಿಯಾಗುತ್ತಿರಲಿಲ್ಲ. ಆದರೆ ಈ ಬಾರಿ ಯಾವುದೇ ಸಡಿಲಿಕೆ ನೀಡಲಾಗುತ್ತಿಲ್ಲ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೂ ಕೇಂದ್ರದೊಳಕ್ಕೆ ಮೊಬೈಲ್ ತಾರದಂತೆ ಕಟ್ಟಪ್ಪಣೆ ಮಾಡಲಾಗಿದೆ. ವಾಟ್ಸ್ ಅ್ಯಪ್, ಹೈಕ್ ಇತ್ಯಾದಿ ಮೂಲಕ ಪ್ರಶ್ನೆಪತ್ರಿಕೆ ಹಾಗೂ ಉತ್ತರಗಳನ್ನು ರವಾನಿಸುವ ಸಾಧ್ಯತೆ ಇರುವ ಕಾರಣ ಮೇಲ್ವಿಚಾರಕರು ಮೊಬೈಲ್ ಇಟ್ಟುಕೊಂಡಲ್ಲಿ ಕ್ರಮಕ್ಕೆ ಗುರಿಯಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT