ಮಂಗಳೂರಿನಲ್ಲಿ ಎಂಟು ಬಾಂಬ್ ಪತ್ತೆ: ಆತಂಕ ಸೃಷ್ಠಿ
ಮಂಗಳೂರಿನಲ್ಲಿ ಪೆಟ್ರೋಲ್ ಬಾಂಬ್ ಗಳು ಪತ್ತೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಬಜ್ಪೆ(ಮಂಗಳೂರು): ಮಂಗಳೂರಿನಲ್ಲಿ ಪೆಟ್ರೋಲ್ ಬಾಂಬ್ ಗಳು ಪತ್ತೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರಿನ ಬಜ್ಪೆಯ ಗಂಜಿಮಠದ ಬಳಿಯ ದೂರವಾಣಿ ವಿನಿಮಯ ಕಾಂಪೌಂಡ್ ನಲ್ಲಿ ಎಂಟು ಪೆಟ್ರೋಲ್ ಬಾಂಬ್ ಗಳು ಹಾಗೂ ಎರಡು ಲಾಂಗ್ ಗಳು ಪತ್ತೆಯಾಗಿವೆ.
ಇದನ್ನು ಗಮನಿಸಿದ ಸ್ಥಳೀಯರು, ತಕ್ಷಣ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಇದೇ ನಗರದಲ್ಲಿ ಗಲಭೆ ಸೃಷ್ಠಿಸಲು ಪೆಟ್ರೋಲ್ ಬಾಂಬ್ ಗಳನ್ನು ಅಡಗಿಸಿ ಇಡಲಾಗಿತ್ತೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಮುರುಗನ್ ಅವರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.