ಕರ್ನಾಟಕ ಹೈ ಕೋರ್ಟ್ 
ಜಿಲ್ಲಾ ಸುದ್ದಿ

ಬೈಲಾ ಉಲ್ಲಂಘಿಸಿದ ಚರ್ಚ್ ಬಾಗಿಲು ಮುಚ್ಚಲು ಆದೇಶ

ಕಟ್ಟಡ ಬೈಲಾ ಉಲ್ಲಂಘಿಸಿ ಕಮ್ಮನಹಳ್ಳಿ ಬಳಿ ಚರ್ಚ್ ನಿರ್ಮಿಸಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಪಾಲಿಕೆ ಮುಂದಿನ ಆದೇಶ ಹೊರಡಿಸುವವರೆಗೂ ಚರ್ಚ್ ಬಾಗಿಲು ತೆರೆಯದಂತೆ ಹೈಕೋರ್ಟ್ ಆದೇಶಿಸಿದೆ...

ಬೆಂಗಳೂರು: ಕಟ್ಟಡ ಬೈಲಾ ಉಲ್ಲಂಘಿಸಿ ಕಮ್ಮನಹಳ್ಳಿ ಬಳಿ ಚರ್ಚ್ ನಿರ್ಮಿಸಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಪಾಲಿಕೆ ಮುಂದಿನ ಆದೇಶ ಹೊರಡಿಸುವವರೆಗೂ ಚರ್ಚ್ ಬಾಗಿಲು ತೆರೆಯದಂತೆ ಹೈಕೋರ್ಟ್ ಆದೇಶಿಸಿದೆ.

ನಗರದ ಕಮ್ಮನಹಳ್ಳಿ ಬಳಿ ಇರುವ ಸೇಂಟ್ ಫಿಯೂಸ್ ಚರ್ಚ್‍ನ ಕಟ್ಟಡ, ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆ 1976ರ ಪ್ರಕಾರ ಉಲ್ಲಂಘನೆ ಆಗಿರುವುದಾಗಿ ಆರೋಪಿಸಿ ಬರ್ತಾಲೋಮಿಯೋ ಮತ್ತು ಜಾರ್ಜ್ ಕುಮಾರ್ ಹೈಕೋರ್ಟ್‍ನಲ್ಲಿ ತಕರಾರು ಅರ್ಜಿ ದಾಖಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಪೀಠ, ಕೆಎಂಸಿ ಕಾಯ್ದೆ ಸೆಕ್ಷನ್ 321(3)ರ ಪ್ರಕಾರ ಪಾಲಿಕೆ ಆದೇಶ ಹೊರಡಿಸಿ, ಉಲ್ಲಂಘನೆ ಆಗಿರುವ ಭಾಗವನ್ನು ಕಾನೂನಿನ ಪ್ರಕಾರ ಕೆಡವಲು ಕ್ರಮ ಜರುಗಿಸುಬೇಕೆಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ.

ವೇತನ ತಡೆ
ನಗರದ ದೇವರ ಜೀವನಹಳ್ಳಿ ಬಳಿ ರಾಜ ಕಾಲುವೆ ಸುತ್ತಮುತ್ತ ಶೇಖರಣೆ ಆಗಿರುವ ತ್ಯಾಜ್ಯ ವಿಲೇವಾರಿ ಹಾಗೂ ಒತ್ತುವರಿ ಕಾರ್ಯವನ್ನು ತೆರವುಗೊಳಿಸದಿದ್ದಲ್ಲಿ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳ ವೇತನ ತಡೆಹಿಡಿಯಲು ಆದೇಶ ಮಾಡುವುದಾಗಿ ಹೈಕೋರ್ಟ್ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ದೇವರ ಜೀವನಹಳ್ಳಿ ಬಳಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಕೋರಿ ಆರ್‍ಟಿಐ ಕಾರ್ಯಕರ್ತ ಪಿ.ಉದಯ್ ಕುಮಾರ್ ಸೇರಿ ಐವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲಾ ಮತ್ತು ನ್ಯಾ.ರಾಮಮೋಹನ ರೆಡ್ಡಿ ವಿಭಾಗೀಯ ಪೀಠ, ತ್ಯಾಜ್ಯ ವಿಲೇವಾರಿ ಹಾಗೂ ಒತ್ತುವರಿ ಕಾರ್ಯ ತೆರವುಗೊಳಿಸುವುದು ಅಧಿಕಾರಿಗಳ ಕರ್ತವ್ಯ.ತಮ್ಮ ಕರ್ತವ್ಯವನ್ನು ನಿಭಾಯಿಸಲು ವಿಫಲವಾದಲ್ಲಿ ಸಂಬಂಧಪಟ್ಟವರ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಪೀಠ ಆದೇಶಿಸಿದೆ.

ಸಮಸ್ಯೆಯೇನು?
ದೇವರ ಜೀವನಹಳ್ಳಿ ಬಳಿ ರಾಜಕಾಲುವೆ ಒತ್ತುವರಿಯಾಗಿದ್ದು ಇದರಿಂದಾಗಿ ಅಲ್ಲಿನ ನಿವಾಸಿಗಳು ಜೀವನ ನಡೆಸುವುದೇ ಕಷ್ಟಕರವಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಚರಂಡಿ ನೀರು ರಸ್ತೆಗಳಿಗೆ ಹರಿಯುವ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಈ ಹಿಂದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಒತ್ತುವರಿ ತೆರವುಗೊಳಿಸಲು ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!