ಅಪ್ರಾಪ್ತೆ ಮೇಲೆ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿಗಳಿಂದ ರೇಪ್
ಆರು ವರ್ಷದ ಬಾಲಕಿ ಮೇಲೆ ಇಬ್ಬರು ಹೈಸ್ಕೂಲ್ ವಿದಾರ್ಥಿಗಳು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಇಬ್ಬರು ಹೈಸ್ಕೂಲ್ ವಿದಾರ್ಥಿಗಳು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ಬೇಸಿಗೆ ರಜೆಗಾಗಿ ಎಚ್ ಎಸ್ಆರ್ ಲೇಔಟ್ ನಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಶನಿವಾರ ಮಧ್ಯಾಹ್ನ ಬಾಲಕಿ ಆಟವಾಡುತ್ತಿದ್ದ ವೇಳೆ ಬನ್ನೇರುಘಟ್ಟದ ಗ್ರಾಮದ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ.
ಬಾಲಕಿಯನ್ನು ಹುಡುಕುತ್ತಾ ಬಂದ ಆಕೆಯ ಸಹೋದರ ಕೃತ್ಯವನ್ನು ಕಣ್ಣಾರೆ ಕಂಡು, ಅಲ್ಲಿಂದ ಓಡಿಹೋಗಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾನೆ.
ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಿಕ್ಷೆ ನಡೆಸಿದ್ದಾರೆ. ವೈದ್ಯರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ದೃಢಪಡಿಸಿದ್ದಾರೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬನ್ನೇರುಘಟ್ಟ ಪೊಲೀಸರು ಒಬ್ಬ ವಿದ್ಯಾರ್ಥಿಯನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.