ಆಮೀರ್ ಖಾನ್ ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕುಖ್ಯಾತ ರೌಡಿ ಆಮೀರ್ ಖಾನ್ ಬಂಧನ

ಕುಖ್ಯಾತ ರೌಜಿ ಆಮೀರ್ ಖಾನ್ ನನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕುಖ್ಯಾತ ರೌಜಿ ಆಮೀರ್ ಖಾನ್ ನನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ಕುಖ್ಯಾತಿ ಗಳಿಸಿದ್ದ ಲೇ.ಕೋಳಿ ಫಯಾಜ್ ನ ಮಗ ಆಮೀರ್ ಖಾನ್ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸುವಲ್ಲಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಸಿಬಿ ಪೊಲೀಸರ ಸಹಕಾರದೊಂದಿಗೆ ಪೊಲೀಸರು ಆಮೀರ್ ಖಾನ್ ಆತನ ಇಬ್ಬರು ಸಹಚರರಾದ ಆಸಿಫ್ ಮತ್ತು ರೋಷನ್ ಅವರನ್ನು ಬಂಧಿಸಿದ್ದಾರೆ.

ಬಂಧಿತರ ಮೇಲೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಸರಗಳ್ಳತನದಂತಹ ಹಲವಾರು ನಿಷೇಧಿತ ಚಟುವಟಿಕೆಗಳಲ್ಲಿ ಇವರು ತೊಡಗಿದ್ದರು. ಬಂಧಿತರಿಂದ ಹಲವು ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ರೌಡಿ ಆಮೀರ್ ಖಾನ್ ನ ವಿರೋಧಿ ಬ್ರಿಗೇಡ್ ಅಜಮ್ ನನ್ನು ಕೊಂದು ಹಾಕಲು ಈ ಮೂವರು ಸ್ಕೆಚ್ ರೂಪಿಸಿದ್ದರು ಎಂದು ಪೊಲೀಸ್ ತನಿಖೆಯ ಬಳಿಕ ತಿಳಿದುಬಂದಿದೆ.

ಒಟ್ಟಾರೆ ಬೆಂಗಳೂರಿನ ಹಲವು ನಾಗರೀಕರನ್ನು ಹೆದರಿಸಿ-ಬೆದರಿಸಿ ಬದುಕುತ್ತಿದ್ದ ಕುಖ್ಯಾತ ರೌಡಿ ಗುಂಪೊಂದು ಇದೀಗ ಜೈಲು ಕಂಬಿಯ ಹಿಂದಕ್ಕೆ ಸರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!