ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಎಲ್ಲ ಜಿಲ್ಲೆಗಳಲ್ಲೂ ಗಾಂಧಿ ಭವನ ಸ್ಥಾಪನೆ: ಸಿದ್ದರಾಮಯ್ಯ

ಎಲ್ಲ ಜಿಲ್ಲೆಗಳಲ್ಲೂ ಸರ್ಕಾರ ಗಾಂಧಿ ಭವನ ನಿರ್ಮಿಸುತ್ತದೆ. ಆ ಮೂಲಕ ಗಾಂಧೀಜಿ ಸಿದ್ಧಾಂತವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲೂ ಸರ್ಕಾರ ಗಾಂಧಿ ಭವನ ನಿರ್ಮಿಸುತ್ತದೆ. ಆ ಮೂಲಕ ಗಾಂಧೀಜಿ ಸಿದ್ಧಾಂತವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೆಂಟ್ರಲ್ ಕಾಲೇಜಿನ ಜ್ಞಾನಭಾರತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ `ಕರ್ನಾಟಕದಲ್ಲಿ ಗಾಂಧಿ ಮೊದಲ ಹೆಜ್ಜೆ' ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಿ, ಗಾಂಧಿ ಸ್ಮಾರಕ ಭವನ ಹೆಚ್ಚಿನ ಕೆಲಸ ಮಾಡುವಂತಾಗಬೇಕು. ಯಾವುದೇ ಹೊಸ ಕಾರ್ಯಕ್ರಮ ಹಮ್ಮಿಕೊಂಡರೂ ಸರ್ಕಾರ ಪ್ರೊತ್ಸಾಹಿಸುತ್ತದೆ ಎಂದು ಭರವಸೆ ನೀಡಿದರು.

ಗಾಂಧೀಜಿ ಜಗತ್ತಿಗೇ ನಾಯಕ. ಅಮೆರಿಕ ಅಧ್ಯಕ್ಷ ಒಬಾಮಾ, ಮಾರ್ಟಿನ್ ಲೂಥರ್ ಸಹ ಮಹಾತ್ಮನ ಗುಣಗಾನ ಮಾಡಿದ್ದಾರೆ. ಎಲ್ಲ ಧರ್ಮಗಳನ್ನು ಪ್ರೀತಿಸುವ, ಸಕಲ ಧರ್ಮೀಯ. ಗ್ರಾಮಗಳ ಸ್ವಾವಲಂಬನೆ ಕನಸು ಕಂಡಿದ್ದ ಅವರು, ತೀವ್ರ ಸಮಸ್ಯೆಗಳನ್ನೂ ಬಗೆಹರಿಸುವಂತವರಾಗಿದ್ದರು. ಸುಖಾ ಸುಮ್ಮನೆ ನ್ಯಾಯಾಲಯಗಳ ಮೆಟ್ಟಿಲು ಹತ್ತದಂತೆ
ನೋಡಿಕೊಳ್ಳುತ್ತಿದ್ದರು ಎಂದರು.

ಚಿಂತನೆಗಳು ಎಂದಿಗೂ ಪ್ರಸ್ತುತ
ಗಾಂಧೀಜಿ ಬದುಕಿರುವವರೆಗೂ ಸತ್ಯದ ಅನ್ವೇಷಣೆಯಲ್ಲಿ ತೊಡಗಿದ್ದರು. ಕೋಮು ಸೌಹಾರ್ದತೆಯ ಪ್ರತೀಕವಾಗಿದ್ದರು. ಕರ್ನಾಟಕಕ್ಕೆ 18 ಬಾರಿ ಆಗಮಿಸಿದ್ದಾರೆ. ಬೀದರ್, ರಾಯಚೂರು, ಕೊಪ್ಪಳ ಜಿಲ್ಲೆ ಬಿಟ್ಟರೆ ಉಳಿದೆಲ್ಲೆಡೆ ಸಂಚರಿಸಿರುವುದು ರಾಜ್ಯದ ಜನರ ಪುಣ್ಯ ಎಂದು ಹೇಳಿದರು. ನವದೆಹಲಿಯ ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕ ವಸ್ತು ಸಂಗ್ರಹಾಲಯ ನಿರ್ದೇಶಕ ಅಣ್ಣಾಮಲೈ, ಬೇರೆ ರಾಜ್ಯಗಳಲ್ಲಿ ಇಂಥ ಸರ್ಕಾರಿ ಕಾರ್ಯಕ್ರಮ ಮಾಡುವುದಾದರೆ ಜನರ, ಸಂಘ-ಸಂಸ್ಥೆಗಳ ಸಹಕಾರ ಅಗತ್ಯ. ಆದರೆ, ಇಲ್ಲಿ ರಾಜ್ಯ ಸರ್ಕಾರವೇ ಸ್ವತಃ ಆಸಕ್ತಿ ವಹಿಸಿರುವುದನ್ನು ಶ್ಲಾಘಿಸಿದರು. ಸಚಿವ ರಾದ ರೋಷನ್‍ಬೇಗ್, ಸಚಿವ ಎಚ್.ಕೆ. ಪಾಟೀಲ್, ಉಮಾಶ್ರೀ ಇತರರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT