ನೇಣು(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೌಟುಂಬಿಕ ಕಲಹ: ನವ ವಿವಾಹಿತೆ ನೇಣಿಗೆ ಶರಣು

ಕೌಟುಂಬಿಕ ಕಲಹಕ್ಕೆ ಬೇಸತ್ತು ನವ ವಿವಾಹಿತೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕಮಲಾ ನಗರ ಬಳಿಯ ಕಸ್ತೂರಿ ನಗರದಲ್ಲಿ ಶುಕ್ರವಾರ ನಡೆದಿದೆ...

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ನವ ವಿವಾಹಿತೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕಮಲಾ ನಗರ ಬಳಿಯ ಕಸ್ತೂರಿ ನಗರದಲ್ಲಿ ಶುಕ್ರವಾರ ನಡೆದಿದೆ.

ಕಾರ್ತಿಕ್ ಎಂಬುವರ ಪತ್ನಿ ಪವಿತ್ರಾ (22) ಮೃತರು. ಶುಕ್ರವಾರ ಮಧ್ಯಾಹ್ನ ಪತಿ ಕೆಲಸದ ಮೇಲೆ ಹೊರ ಹೋಗಿದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಆರ್ ಪುರ ಮೂಲದ ಪವಿತ್ರಾ, ಖಾಸಗಿ ಕಂಪನಿ ಉದ್ಯೋಗಿ ಕಾರ್ತಿಕ್ ಅವರನ್ನು 6 ತಿಂಗಳ ಹಿಂದೆ ವಿವಾಹವಾಗಿದ್ದರು. ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಗುರುವಾರ ಪತಿ ಕೆಲಸದ ಮೇಲೆ ಮನೆಯಿಂದ ತೆರಳಿದ ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊರಗೆ ಹೋಗಿದ್ದ ಪತಿ ಮನೆಗೆ ಬಂದಾಗ ಪತ್ನಿಯನ್ನು ನೇಣಿನ ಕುಣಿಕೆಯಿಂದ ಇಳಿಸಿ ಆಸ್ಪತ್ರೆಗೆ ಕರೆ ದೊಯ್ದಿದ್ದಾನೆ. ಅಷ್ಟರಲ್ಲಾಗಲೇ ಪವಿತ್ರಾ ಮೃತಪಟ್ಟಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ವರದಕ್ಷಿಣೆಗಾಗಿ ತಮ್ಮ ಮಗಳಿಗೆ ಅಳಿಯ ಕಾರ್ತಿಕ್ ಹಾಗೂ ಆತನ ಕುಟುಂಬದವರು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಪವಿತ್ರಾ ಪೋಷಕರು ಆರೋಪಿಸಿದ್ದಾರೆಂದು ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

Anchor Anushree Marriage: ರೋಷನ್ ಜೊತೆ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ

SCROLL FOR NEXT