ಸಿಇಟಿ ಪರೀಕ್ಷೆ 
ಜಿಲ್ಲಾ ಸುದ್ದಿ

ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭ

ರಾಜ್ಯಾದ್ಯಂತ ಮೇ 12 ಮತ್ತು 13 ರಂದು ರಾಜ್ಯದ 343 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ-2015 ಪರೀಕ್ಷೆಗಳು ನಡೆಯಲಿವೆ...

ಬೆಂಗಳೂರು: ರಾಜ್ಯಾದ್ಯಂತ ಮೇ 12 ಮತ್ತು 13 ರಂದು ರಾಜ್ಯದ 343 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ-2015 ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಪ್ರವೇಶಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳದಿದ್ದಲ್ಲಿ ಡೌನ್ ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರಕ್ಕೆ ಅರ್ಥಗಂಟೆ ಮೊದಲೇ ಹಾಜರಾಗಬೇಕು. ಎಲ್ಲ ಅಭ್ಯರ್ಥಿಗಳು ಮೇ 1 ರಂದು ರಸಾಯನಶಾಸ್ತ್ರದ ಪರೀಕ್ಷೆ ಬರೆದ ನಂತರ ಪರೀಕ್ಷಾ ಕೇಂದ್ರದಿಂದ ಹೊರಹೋಗವ ಮುನ್ನ ಓಪನ್ ಎಂಟ್ರಿ ಸೀಟು ಹಂಚಿಕೆ ವಿಧಾನ ಮತ್ತಿತರ ವಿವರಗಳನ್ನು ಒಳಗೊಂಡ ಸಿಇಟಿ-2015ರ ಬ್ರೋಚರ್ ಅನ್ನು ಪರೀಕ್ಷಾಧಿಕಾರಿಗಳಿಂದ ಪಡೆಯಬೇಕು ಎಂದು ತಿಳಿಸಲಾಗಿದೆ.

ಮೊದಲ ಸುತ್ತಿನ ಸೀಟು ಹಂಚಿಕೆ
ಸೇವಾನಿರತ ಅಭ್ಯರ್ಥಿಗಳಿಗೆ ವೈದ್ಯಕೀಯ, ದಂತ ವೈದ್ಯಕೀಯ ಸ್ನಾತಕೋತ್ತರ ಸೀಟು ಹಂಚಿಕೆಯ ಮೊದಲನೇ ಸುತ್ತು ಜಾರಿಯಲ್ಲಿದ್ದು ಮೇ 11 ರಿಂದ 14ರ ಮಧ್ಯಾಹ್ನ 12 ಗಂಟೆವರೆಗೆ ಓಪನ್ ಎಂಟ್ರಿ ಮಾಡಲು ಅವಕಾಶವಿದೆ.

ಮಾಕ್ ಅಲಾಟ್ ಮೆಂಟ್ ಫಲಿತಾಂಶ ಮೇ 14 ರಂದು ಸಂಜೆ 5 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಪ್ರಕಟಿಸಲಾಗುತ್ತದೆ. ಅನಂತರ, ಮೇ.16 ತಮ್ಮ ಆಯ್ಕೆಯಲ್ಲಿ ಬದಲಾವಣೆ ಮಾಡಲು ಅಭ್ಯರ್ಥಿಗಳಿಗೆ ಅವಕಾಶವಿದೆ. ಅಂದು ಸಂಜೆ 5 ಗಂಟೆಗೆ ಮೊದಲ ಸುತ್ತಿನ ಫಲಿತಾಂಶ ಪ್ರಕಟವಾಗುತ್ತದೆ. ಮೇ. 18 ಮತ್ತು 19 ರಂದು ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವುದು. ಶುಲ್ಕ ಪಾವತಿ ಮತ್ತು ಪ್ರವೇಶಾನುಮತಿ ಪತ್ರ ಪಡೆದುಕೊಳ್ಳುವುದರೊಂದಿಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಮೇ 19 ಕೊನೆಯ ದಿನವಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT