ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ವಿಭಜನೆಗೆ ಆರ್‍ಪಿಐ ವಿರೋಧ

ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ...

ಬೆಂಗಳೂರು: ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಲಗ್ಗೆರೆ ಲಕ್ಷ್ಮೀದೇವಿ ನಗರದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಪಶ್ಚಿಮ ವಿಭಾಗದ ಆರ್‍ಪಿಐ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅಧಿಕಾರದ ರುಚಿ ಕಂಡ ಯಾವುದೇ ಪಕ್ಷಕ್ಕೂ ಬೆಂಗಳೂರು ನಗರದ ಐಕ್ಯತೆ ಮತ್ತು ಅಭಿವೃದ್ಧಿ ಬೇಕಾಗಿಲ್ಲ. ಅಭಿವೃದ್ಧಿ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಹೊಡೆದ ಕುಖ್ಯಾತಿ ಎಲ್ಲ ಪಕ್ಷಗಳಿಗೂ ಅಂಟಿದೆ. ಮತ್ತೆ ಅದೇ ಪಕ್ಷಗಳು ಅಬಿsವೃದಿಟಛಿ ಸೋಗಿನಲ್ಲಿ ಜನತೆ ಮುಂದೆ ಬರಲಿವೆ. ಈ ಸಂದರ್ಭದಲ್ಲಿ ನಗರದ ಜನತೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಭಾರತೀಯ ರಿಪಬ್ಲಿಕನ್ ಪಕ್ಷ ಬಿಬಿಎಂಪಿ ವಿಭಜನೆಯನ್ನು ತೀವ್ರವಾಗಿ ಖಂಡಿಸುತ್ತದೆ. ನಗರದ ಐಕ್ಯತೆ ದೃಷ್ಟಿಯಿಂದ ವಿಭಜನೆ ಮಾಡಬಾರದೆಂದು ಒತ್ತಾಯಿಸಿ ಈಗಾಗಲೇ ತಾವು ಹೋರಾಟ ನಡೆಸಿದ್ದೇವೆ. ಇದರ ಮುಂದುವರೆದ ಭಾಗವಾಗಿ ನಗರದ ಅಭಿವೃದ್ಧಿ ಮತ್ತು ಐಕ್ಯತೆಯನ್ನು ಪ್ರಧಾನವಾಗಿಟ್ಟುಕೊಂಡು ಚುನಾವಣೆ ಎದುರಿಸಲು ಸಿದ್ದತೆ ನಡೆಸಿದ್ದೇವೆ. ಪಾಲಿಕೆ ಎಲ್ಲ ವಾರ್ಡ್‍ಗಳಲ್ಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆಂದು ಹೇಳಿದರು.

ಸಮಾವೇಶಕ್ಕೂ ಮುನ್ನ ಅಂಬೇಡ್ಕರ್ ಜಯಂತ್ಯುತ್ಸವದ ಭೀಮರಥದ ಮೆರವಣಿಗೆಯು ಸೋನಾಲ್ ಗಾರ್ಮೆಂಟ್ಸ್ ಮುಂಭಾಗ ಆವರಣದಿಂದ ಲಕ್ಷ್ಮೀದೇವಿ ನಗರದವರೆಗೆ ಸಾಗಿ ಬಂತು. ನಂತರ ನಡೆದ ಸಮಾವೇಶದಲ್ಲಿ ಆರ್‍ಪಿಐ ಪಕ್ಷದ ಮುಖಂಡರಾದ ವೈ.ಎಸ್. ದೇವೂರ್,ಆರ್.ಎಂ.ಎನ್. ರಮೇಶ್, ವಕೀಲರ ಘಟಕದ ರಾಜ್ಯಾಧ್ಯಕ್ಷ ಅನಂತ್ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT