ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರೇಷ್ಮೆ ಆಮದು ಸುಂಕ ಕಡಿಮೆ: ರೈತರ ಪ್ರತಿಭಟನೆ

ಕೇಂದ್ರ ಸರ್ಕಾರವು ರೇಷ್ಮೆ ಆಮದು ಸುಂಕವನ್ನು ಕಡಿಮೆ ಮಾಡಿರುವುದನ್ನು ವಿರೋಧಿಸಿ ರೈತರು ಹಾಗೂ ರೀಲರ್ ಗಳು ರೇಷ್ಮೆ ಗೂಡಿನ ಮಾರುಕಟ್ಟೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು...

ವಿಜಯಪುರ: ಕೇಂದ್ರ ಸರ್ಕಾರವು ರೇಷ್ಮೆ ಆಮದು ಸುಂಕವನ್ನು ಕಡಿಮೆ ಮಾಡಿರುವುದನ್ನು ವಿರೋಧಿಸಿ ರೈತರು ಹಾಗೂ ರೀಲರ್ ಗಳು ರೇಷ್ಮೆ ಗೂಡಿನ ಮಾರುಕಟ್ಟೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ, ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮಳ್ಳೂರು ಶಿವಣ್ಣೆ ಮಾತನಾಡಿ, ಹಿಂದೆ ಇದ್ದ ರೇಷ್ಮೆ ಆಮದು ಶುಲ್ಕವನ್ನು ಶೇ.10ಕ್ಕೆ ಕೇಂದ್ರ ಸರ್ಕಾರವೂ ಇಳಿಸಿದ್ದು, ರೇಷ್ಮೆ ಬೆಲೆ ಇಳಿಯಲು ಕಾರಣವಾಗಿದೆ. ರಾಜ್ಯದಲ್ಲಿ 1.60 ಲಕ್ಷ ರೇಷ್ಮೆ ಬೆಳೆಗಾರರಿದ್ದು 40 ಸಾವಿರಕ್ಕೂ ಹೆಚ್ಚು ರೇಷ್ಮೆ ನೂಲು ಬಿಚ್ಚಣಿಕೆದಾರರ ಕುಟುಂಬಗಳಿವೆ.

ಇವರ ಬಗ್ಗೆ ಚಿಂತನೆ ನಡೆಸದೇ ರೇಷ್ಮೆ ಆಮದು ಶುಲ್ಕವನ್ನು ಇಳಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ರೇಷ್ಮೆ ಅಮದು ಸುಂಕವನ್ನು ಹೆಚ್ಚಿಸಬೇಕು. ದೇಶದ ಅನ್ನದಾತನಾದ ರೈತನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು ಎಂದು
ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಯಲುವಳ್ಳಿ ರಮೇಶ್, ರು.400 ಇದ್ದಂತಹ ಗೂಡಿನ ಬೆಲೆಯೂ ರು.220 ರಿಂದ ರು.270ಕ್ಕೆ ಇಳಿಕೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ಪ್ರತಿಭಟನೆ ನಂತರ ಉಪನಿರ್ದೇಶಕ ದಾದನೂರು ಅವರಿಗೆ ಮನವಿ ಸಲ್ಲಿಸಲಾಯಿತು. ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿ ರಸ್ತೆ ತಡೆ ನಡೆಸಲು ಪ್ರಯತ್ನಿಸಿದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT