ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಾದಕವಸ್ತು ಮಾರಾಟ ಮೂವರ ಬಂಧನ

ಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನ ರಘು (34), ದಾಸರಕೊಪ್ಪಲು ಗ್ರಾಮದ ಕಿರಣ್ (29) ಹಾಗೂ ಹಳೇ ಕೊಪ್ಪಲು ಪ್ರದೇಶದ ಹೇಮಂತ್ ಕುಮಾರ್ (34) ಬಂಧಿತರು. ಇವರಿಂದ ರು.8 ಲಕ್ಷ ಮೌಲ್ಯದ 4 ಕೆ.ಜಿ. ಚರಸ್ 3 ಮೊಬೈಲ್ ಫೋನ್ ಹಾಗೂ ರು.900 ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಐಟಿಬಿಟಿ ಉದ್ಯೋಗಿಗಳಿಗೆ ಚರಸ್ ಪೂರೈಸುತ್ತಿದ್ದರು. ಯಶವಂತಪುರದಲ್ಲಿರುವ ಸ್ಟಾರ್ ಲಾಡ್ಜ್ ನ ಕೊಠಡಿಯಲ್ಲಿ ಚರಸ್ ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಕೊಂಡರಾಜ ಎಂಬಾತನಿಂದ ಚರಸ್ ನಗರಕ್ಕೆ ತಂದು ಎಲ್ಲರೂ ಮಾರಾಟ ಮಾಡುತ್ತಿದ್ದೆವೆಂದು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ, ಆಗಿದ್ದೇನು?