ಕಾಂಗ್ರೆಸ್ 
ಜಿಲ್ಲಾ ಸುದ್ದಿ

ಅವ್ಯವಹಾರ ಪತ್ತೆಗೆ ಸಮಿತಿ ರಚಿಸಿದ ಕಾಂಗ್ರೆಸ್

ಬಿಬಿಎಂಪಿಯಲ್ಲಿ ಕಳೆದ ಐದು ವರ್ಷದಿಂದ ಬಿಜೆಪಿ ನಡೆಸಿದ ಆಡಳಿತಾವಧಿಯಲ್ಲಿ ಆದ ಅವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದಕ್ಕೆ ಮಾಜಿ ಮೇಯರ್ ಪಿ.ಆರ್.ರಮೇಶ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವುದಕ್ಕೆ ಕಾಂಗ್ರೆಸ್ ನಿರ್ಧರಿಸಿದೆ...

ಬೆಂಗಳೂರು: ಬಿಬಿಎಂಪಿಯಲ್ಲಿ ಕಳೆದ ಐದು ವರ್ಷದಿಂದ ಬಿಜೆಪಿ ನಡೆಸಿದ ಆಡಳಿತಾವಧಿಯಲ್ಲಿ ಆದ ಅವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದಕ್ಕೆ ಮಾಜಿ ಮೇಯರ್ ಪಿ.ಆರ್.ರಮೇಶ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವುದಕ್ಕೆ ಕಾಂಗ್ರೆಸ್ ನಿರ್ಧರಿಸಿದೆ.

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ನೇತೃತ್ವದಲ್ಲಿ ನಡೆದ ಬೆಂಗಳೂರು ಮಹಾನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬಿಜೆಪಿ ಅವಧಿಯಲ್ಲಿ
ನಡೆದ ಅವ್ಯವಹಾರ ಮತ್ತು ತಪ್ಪುಗಳ ಬಗ್ಗೆ ಈ ಸಮಿತಿ ಪಟ್ಟಿ ಮಾಡುತ್ತದೆ. ಮಾತ್ರವಲ್ಲ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಮುಖ ಅಸuಉವಾಗಿಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಪ್ರಚಾರಾಂದೋಲನ ನಡೆಸಲು ನಿರ್ಧರಿಸಲಾಗಿದೆ.

ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಈ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಮಾಜಿ ಮೇಯರ್‍ಗಳು, ಮುಂಚೂಣಿ ಘಟಕದ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಸದಸ್ಯತ್ವ ಅಭಿಯಾನ, ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಬಗ್ಗೆ ಪ್ರಮುಖವಾಗಿ ಸಭೆಯಲ್ಲಿ ಚರ್ಚೆ ನಡೆದಿದೆ.

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನವನ್ನು ರಾಷ್ಟ್ರವ್ಯಾಪಿ ಜೂನ್ 15ರವರೆಗೆ ವಿಸ್ತರಿಸಿ ವರಿಷ್ಠರು ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿ ಚುನಾವಣೆಯನ್ನು ದೃಷ್ಟಿಲ್ಲಿಟ್ಟುಕೊಂಡು ಸದ
ಸ್ಯತ್ವ ನೋಂದಣಿ ಮಾಡುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಪ್ರತಿ ಬೂತ್‍ನಲ್ಲಿ ಕನಿಷ್ಠ 50 ಸದಸ್ಯರ ನೇಮಕ ಮಾಡುವಂತೆ ಮುಖಂಡರಿಗೆ ಸೂಚನೆ ನೀಡಲಾಗಿದೆ. ಇದರ
ಜತೆಗೆ ಬೆಂಗಳೂರು ನಗರಕ್ಕೆ ಹೊಂದಿಕೊಂಡ ಪ್ರದೇಶದಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗರ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಮುಖಂಡರು ಆದೇಶ ನೀಡಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆಗೆ ಪ್ರತ್ಯೇಕ ಪ್ರಣಾಳಿಕೆ ರಚಿಸಬೇಕಿದ್ದು, ಪ್ರಣಾಳಿಕೆ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಹೆಸರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪ್ರಕಟಿಸುತ್ತಾರೆ. ಜೂನ್ ಮೊದಲ ವಾರದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ನಡೆಸಲು ಇನ್ನೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ. ಇದೇ ಸಭೆಯಲ್ಲಿ ಮುಖಂಡರ ವರ್ತನೆ ಬಗ್ಗೆ ಯುವ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video