ಜಿಲ್ಲಾ ಸುದ್ದಿ

ಬಿಬಿಆರ್ ಮತ್ತು ಆರ್ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ

Mainashree

ಬೆಂಗಳೂರು: ಬಿಬಿಆರ್ ಮತ್ತು ಆರ್ ಡಿಸಿಸಿ ಬ್ಯಾಂಕ್ ನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಬೇಕು ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಪತ್ರಿಕಾಗೋಷ್ಠಿ ನಡೆಸಿದ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಬಿಬಿಆರ್ ಮತ್ತು ಆರ್ ಡಿಸಿಸಿ ಬ್ಯಾಂಕ್ ಅವ್ಯವಹಾರಗಳ ತಾಣವಾಗಿದೆ. ರೈತರ ನೆರವಿಗೆ ಬರಬೇಕಿದ್ದ ಬ್ಯಾಂಕ್ ಗಳಲ್ಲಿ ಲೂಟಿಕೋರರು ತುಂಬಿದ್ದು, ರೈತರ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಬೆಂಗಳೂರು ನಗರದ ಬನಶಂಕರಿ ರೇಷ್ಮೆ ವಿನಿಮಯ ಶಾಖೆಯಲ್ಲಿ 2010 ಮತ್ತು 2015ನೇ ಸಾಲಿನಲ್ಲಿ ರೈತರಿಗೆ ನೀಡಬೇಕಿದ್ದ ಸುಮಾರು ರು. 11.48 ಕೋಟಿ ಸಾಲದ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ.

ರೈತರಿಗೆ ಸೇರಬೇಕಿದ್ದ ಹಣವನ್ನು ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ. ಈ ಬ್ಯಾಂಕಿನ ಆಡಳಿತ ಮಂಡಳಿಯ ಕೆಲವು ಸದಸ್ಯರು ಹಾಗೂ ಕೇಂದ್ರ ಕಚೇರಿಯಲ್ಲಿನ ಉನ್ನತ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಈ ಸಂಬಂಧ ಸರ್ಕಾರದ ಗಮನಕ್ಕೆ ತಂದಿದ್ದರೂ, ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕೂಡಲೇ ಸರ್ಕಾರ ಈ ಹಗರಣವನ್ನು ಸಿಬಿಐ ತನಿಖೆವಹಿಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

SCROLL FOR NEXT