ಕ್ರೂಸರ್ ವಾಹನ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಟೈರ್ ಸ್ಫೋಟಗೊಂಡು ಕ್ರೂಸರ್ ವಾಹನ ಪಲ್ಟಿ: ಐವರು ದುರ್ಮರಣ

ಆಂಧ್ರದಲ್ಲಿನ ಉಷ್ಣಗಾಳಿ ಪ್ರಕೋಪದಿಂದ ದೂರವಾಗುವ ಸಲುವಾಗಿ ಗೋವಾಕ್ಕೆ ಪ್ರವಾಸ ಹೊರಟಿದ್ದವರು ಮಸಣ ಸೇರಿದ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ...

ಹುಬ್ಬಳ್ಳಿ: ಆಂಧ್ರದಲ್ಲಿನ ಉಷ್ಣಗಾಳಿ ಪ್ರಕೋಪದಿಂದ ದೂರವಾಗುವ ಸಲುವಾಗಿ ಗೋವಾಕ್ಕೆ ಪ್ರವಾಸ ಹೊರಟಿದ್ದವರು ಮಸಣ ಸೇರಿದ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಆಂಧ್ರದ ಕರ್ನೂಲ್ ನಿಂದ ಹನ್ನೊಂದು ಮಂದಿ ತಂಡವೊಂದು ಕ್ರೂಸರ್ ವಾಹನದಲ್ಲಿ ಗೋವಾಕ್ಕೆ ಪ್ರವಾಸ ಹೊರಟ್ಟಿದ್ದರು. ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ರೇಲ್ವೆ ಗೇಟ್ ಬಳಿ ಬರುತ್ತಿದ್ದಂತೆ ಕ್ರೂಸರ್ ವಾಹನದ ಟೈಯರ್ ಸ್ಫೋಟಗೊಂಡ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಟ್ಟಾರೆ ಐದು ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಇಸ್ಮಾಯಿಲ್, ಹುಸೇನ್, ಸುಬಾನ್ , ಛಲಪತಿ ಹಾಗೂ ಆಮೀರ್ ಎಂದು ಗುರುತಿಸಲಾಗಿದೆ. ಇನ್ನುಳಿದಂತೆ ಕ್ರೂಸರ್ ವಾಹನದಲ್ಲಿ 6 ಮಂದಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!