ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆ 
ಜಿಲ್ಲಾ ಸುದ್ದಿ

ಪಿಯುಸಿ ಫಲಿತಾಂಶ ಗೊಂದಲ: ಸುಷ್ಮಾ ಗೋಡಬೊಲೆಗೆ ನೋಟಿಸ್

ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆ...

ಬೆಂಗಳೂರು: ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆಯವರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ ಅವರು ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ಮೇ 18ರಂದು ಪಿಯುಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಸಾಕಷ್ಟು ಗೊಂದಲ ಉಂಟಾಗಿತ್ತು.

ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಒಂದು ರೀತಿಯ ಫಲಿತಾಂಶ ಪ್ರಕಟಗೊಂಡರೆ, ಖಾಸಗಿ ವೆಬ್‍ಸೈಟ್‍ನಲ್ಲಿ ಮತ್ತೊಂದು ರೀತಿಯ ಫಲಿತಾಂಶ ಬಂದಿತ್ತು. ಇದರಿಂದ ಸಾಕಷ್ಟು ಗೊಂದಲ ಉಂಟಾಯಿತಲ್ಲದೇ, ಗೊಂದಲಕ್ಕೆ ಬಿದ್ದ ಪೋಷಕರು ವಿದ್ಯಾರ್ಥಿಗಳನ್ನು ನಿಭಾಯಿಸುವಲ್ಲಿ ಇಲಾಖೆ ವಿಫಲವಾಗಿ, ಪ್ರತಿಭಟನೆ ಬಿಸಿ ಎದುರಿಸಿತ್ತು. ಈ ನಡುವೆ ಸರ್ಕಾರ ಇಲಾಖೆಯ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel