ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಅಕ್ರಮ ವಾಣಿಜ್ಯ ಕಟ್ಟಡ: ಕ್ರಮಕ್ಕೆ ಹೈ ಸೂಚನೆ

ಜನವಸತಿ ಪ್ರದೇಶದ ಕಟ್ಟಡಗಳನ್ನು ಕಾನೂನುಬಾಹಿರವಾಗಿ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಸ್ಥಳ ಪರಿಶೀಲಿಸಿ ಅಕ್ರಮವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ...

ಬೆಂಗಳೂರು: ಜನವಸತಿ ಪ್ರದೇಶದ ಕಟ್ಟಡಗಳನ್ನು ಕಾನೂನುಬಾಹಿರವಾಗಿ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಸ್ಥಳ ಪರಿಶೀಲಿಸಿ ಅಕ್ರಮವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಸಂಬಂಧ ರಾಜಮಹಲ್ ವಿಲಾಸ್ ನಿವಾಸಿಗಳ ಕಲ್ಯಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, ಬಿಬಿಎಂಪಿ ಮತ್ತು ಬಿಡಿಎಗೆ ಸೂಚನೆ ನೀಡಿದೆ. ಜನವಸತಿ ಪ್ರದೇಶದಲ್ಲಿ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬೇಕಾದಲ್ಲಿ ನಗರ ಯೋಜನೆ ಕಾಯಿದೆ ಸೆಕ್ಷನ್ 14ರ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು ಎಂದು ನಿಯಮವಿದೆ.

ಆದರೆ, ಸದಾಶಿವನಗರದ ಆರ್‍ಎಂವಿ ಬಡಾವಣೆಯಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಜನ ವಸತಿ ಪ್ರದೇಶಗಳಲ್ಲಿ ಶಾಲೆಗಳನ್ನು ನಡೆಸುತ್ತಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜಮಹಲ್ ವಿಲಾಸ್ ನಿವಾಸಿಗಳ ಕಲ್ಯಾಣ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ