(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನಿಯಮ ಉಲ್ಲಂಘಿಸಿ ದಂಡ ತೆತ್ತರು

ನಿಯಮ ಉಲ್ಲಂಘಿಸಿ ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದ 300 ವಾಹನ ಚಾಲಕರು ಸಿಕ್ಕಿಬಿದ್ದಿದ್ದು, ಅವರಿಂದ ದಂಡ ವಸೂಲಿ ಮಾಡಲಾಗಿದೆ...

ಬೆಂಗಳೂರು: ನಿಯಮ ಉಲ್ಲಂಘಿಸಿ ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದ 300 ವಾಹನ ಚಾಲಕರು ಸಿಕ್ಕಿಬಿದ್ದಿದ್ದು, ಅವರಿಂದ ದಂಡ ವಸೂಲಿ ಮಾಡಲಾಗಿದೆ.

ರಾಜ್ಯ ಪ್ರಾದೇಶಿಕ ಸಾರಿಗೆ ಹಾಗೂ ಬಿಎಂಟಿಸಿ ಅಧಿಕಾರಿಗಳು ಮಂಗಳವಾರ ನಗರದ ವಿವಿಧೆಡೆ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಸುಮಾರು 5 ಸಾವಿರಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದರು  ಈ ವೇಳೆ ಪರ್ಮಿಟ್ ಉಲ್ಲಂಘನೆ, ದೋಷಪೂರಿತ ನಂಬರ್ ಪ್ಲೇಟ್, ತೆರಿಗೆ ಪಾವತಿ ಬಾಕಿ, ಹೊಗೆ ಪರೀಕ್ಷೆ, ಟಿಂಟೆಡ್ ಗಾಜು ಹೊಂದಿರುವುದು ಸೇರಿ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 300 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗ್ಗೆಯಿಂದಲೇ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಖಾಸಗಿ ಬಸ್‍ಗಳು, ಕಾರು, ಮಾ್ಯಕ್ಸಿಕ್ಯಾಬ್, ಸರಕು ಸಾಗಣೆ ವಾಹನಗಳು ಸೇರಿದಂತೆ ವಿವಿಧ ವಾಹನಗಳ ತಪಾಸಣೆ ನಡೆಸಿದರು. ಹೆಬ್ಬಾಳ, ಗೊರಗುಂಟೆಪಾಳ್ಯ, ನಾಯಂಡಹಳ್ಳಿ, ಟಿನ್ ಫ್ಯಾಕ್ಟರಿ, ಕೆಂಗೇರಿ, ಮೆಜೆಸ್ಟಿಕ್, ಪೀಣ್ಯ, ಎಲೆಕ್ಟ್ರಾನಿಕ್ ಸಿಟಿ, ಸಿಲ್ಕ್‍ಬೋರ್ಡ್ ಜಂಕ್ಷನ್, ಬನ್ನೇರುಘಟ್ಟ ರಸ್ತೆ, ಸುಮ್ಮನಹಳ್ಳಿ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯಿತು.

ರು.10 ಲಕ್ಷ ಕಟ್ಟಿದ ಜನ್ಯ!

ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಗಳು ಅವರ ಜಾಗ್ವಾರ್ ಕಾರನ್ನು ವಶಕ್ಕೆ ಪಡೆದು ನಂತರ ದಂಡ ವಿಧಿಸಿದ್ದಾರೆ. ಕಾರು ಖರೀದಿಸಿ 6 ತಿಂಗಳಾಗಿದ್ದರೂ ನೋಂದಣಿ ಮಾಡಿಸಿರಲಿಲ್ಲ. ಸಾರಿಗೆ ಇಲಾಖೆ ಕಾಯ್ದೆ ಪ್ರಕಾರ ವಾಹನ ಖರೀದಿಸಿದ ಒಂದು ತಿಂಗಳೊಳಗೆ ನೋಂದಣಿ ಮಾಡಿಸಿ, ರಸ್ತೆ ತೆರಿಗೆ ಕಟ್ಟಬೇಕು.

ಫ್ಯಾನ್ಸಿ ನಂಬರ್ `5'ನ್ನು ವಾಹನದ ನೋಂದಣಿ ಸಂಖ್ಯೆಯಾಗಿ ಪಡೆಯಲು ಮನವಿ ನೀಡಿದ್ದರು. ಆದರೆ, ಆ ಸಂಖ್ಯೆ ಸಿಕ್ಕಿರಲಿಲ್ಲ. ಹಾಗಾಗಿ ಕಾರನ್ನು ನೋಂದಣಿ ಮಾಡಿಸಿರಲಿಲ್ಲ. ಮಂಗಳವಾರ ತಮ್ಮ ಜಾಗ್ವಾರ್ ಕಾರಿನಲ್ಲಿ ಕಂಠೀರವ ಸ್ಟುಡಿಯೋಗೆ ಹೋಗುತ್ತಿದ್ದರು. ಈ ವೇಳೆ ಗೊರಗುಂಟೆಪಾಳ್ಯದಲ್ಲಿ ಅಧಿಕಾರಿಗಳು ಜನ್ಯ ಅವರ ಕಾರನ್ನು ಹಿಡಿದಿದ್ದಾರೆ. ನಂತರ ಎಚ್ಚೆತ್ತ ಜನ್ಯ, ಕೂಡಲೇ ಡಿಡಿ ತೆಗೆದು ರಸ್ತೆ ತೆರಿಗೆ ಹಾಗೂ ದಂಡ ಸೇರಿ ರು.10.25 ಲಕ್ಷ ಪಾವತಿಸಿ ಕಾರನ್ನು ಬಿಡಿಸಿಕೊಂಡು ಹೋಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT