ಬೆಂಗಳೂರು: ದೊಡ್ಡಬಳ್ಳಾಪುರ ಸಮೀಪದ ಟೆರ್ರಾಫಾರ್ಮರ್ ಮತ್ತು ಎಂಎಸ್‍ಜಿಪಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದ್ದ ಕಸವನ್ನು ಹಂತ ಹಂತವಾಗಿ ಕಡಿಮೆ ಮಾಡುವ ಜತೆಗೆ ಟೆರ್ರಾ ಫಾರ್ಮರ್ ಕಂಪೆನಿಯನ್ನು ಮಾರ್ಚ್ ಅಂತ್ಯಕ್ಕೆ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತಿ ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಎರಡು ಘಟಕಗಳ ತ್ಯಾಜ್ಯ ವಿಲೇವಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಥಳೀಯ ಮುಖಂಡರ ಜತೆ ಚರ್ಚೆ ನಡೆಸಿದ ನಂತರ ಈ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಗ್ರಾಮಸ್ಥರು ಕಸದ ಸಮಸ್ಯೆಯಿಂದ ಆಗುತ್ತಿರುವ ತೊಂದರೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದರು.
ಬೆಂಗಳೂರು ಅಬಿsವೃದಿಟಛಿ ಸಚಿವ ಕೆ.ಜೆ.ಜಾರ್ಜ್, ಮೇಯರ್ ಮಂಜುನಾಥ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಮಾಹಿತಿ ಪಡೆದುಕೊಂಡ ಅವರು, ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಿಗದಿ ಮಾಡಿದ್ದಕ್ಕಿಂತ ಹೆಚ್ಚಿನ ಕಸವನ್ನು ಸಾಗಿಸಲಾಗುತ್ತಿದೆ ಎಂಬ ದೂರು ನನ್ನ ಗಮನಕ್ಕೂ ಬಂದಿದೆ.
ಪ್ರತಿ ದಿನ 800 ರಿಂದ 1000 ಟನ್‍ನಷ್ಟು ಕಸ ಸಾಗಣೆಯಾಗುತ್ತಿದ್ದು, ಡಿಸೆಂಬರ್ ತಿಂಗಳಿಂದ ಈ ಪ್ರಮಾಣವನ್ನು 600 ಟನ್‍ಗೆ ಇಳಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics