ಬಂಧನ(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಎಸ್ ಐ ಮೇಲೆ ಹಲ್ಲೆ: ಬಂಧನ

ಕರ್ತವ್ಯನಿರತ ಚಿಕ್ಕಪೇಟೆ ಸಂಚಾರ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿದ ಟೆಂಪೋ ಚಾಲಕ ಚಂದ್ರಶೇಖರ್ (28) ಎಂಬಾತನನ್ನು ಕಾಟನ್‍ಪೇಟೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕರ್ತವ್ಯನಿರತ ಚಿಕ್ಕಪೇಟೆ ಸಂಚಾರ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿದ ಟೆಂಪೋ ಚಾಲಕ ಚಂದ್ರಶೇಖರ್ (28) ಎಂಬಾತನನ್ನು ಕಾಟನ್‍ಪೇಟೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಪೇಟೆಯ ಎ.ಎಸ್. ಚಾರ್ ಸ್ಟ್ರೀಟ್‍ನಲ್ಲಿ ಎಸ್ಸೈ ರಾಮಚಂದ್ರ ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಟೆಂಪೊವನ್ನು ಎಸ್ ಸೈ ತಡೆದು ನಿಲ್ಲಿಸಿದ್ದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಟೆಂಪೊ ಚಾಲಕ ಚಂದ್ರಶೇಖರ್, ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ರಾಮಚಂದ್ರ ಅವರು ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ