ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹಿ ಚಿತ್ರ) 
ಜಿಲ್ಲಾ ಸುದ್ದಿ

ಉಪ ಲೋಕಾಯುಕ್ತ ನೇಮಕ ರಾಜ್ಯಪಾಲರ ಜತೆ ಸಿಎಂ ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಿ.ಆರ್. ವಾಲಾ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಈ ಭೇಟಿ ಸಂದರ್ಭದಲ್ಲಿ ಉಪ ಲೋಕಾಯುಕ್ತರ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಿ.ಆರ್. ವಾಲಾ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಈ ಭೇಟಿ ಸಂದರ್ಭದಲ್ಲಿ ಉಪ ಲೋಕಾಯುಕ್ತರ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ.

ಸಂಜೆ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಅವರು ರಾಜ್ಯಪಾಲರಿಗೆ ಪುಷ್ಪಗುಚ್ಛ ನೀಡಿದಾಗ ಇಬ್ಬರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ನಿವೃತ್ತ ನ್ಯಾಯಮೂರ್ತಿ ಕೆ.
ಎಲ್.ಮಂಜುನಾಥ್ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಿಸುವಂತೆ ಸರ್ಕಾರ 3 ಸಲ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರೂ ಅದಕ್ಕೆ ಅಂಕಿತ ಹಾಕಿಲ್ಲ. ಹಾಗಾಗಿ ಈ ಬಗ್ಗೆಯೂ ಚರ್ಚಿಸಿದರೆಂದು ತಿಳಿದುಬಂದಿದೆ.

ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಉಪ ಲೋಕಾಯುಕ್ತ ಹುದ್ದೆಗೆ ಕೆ. ಎಲ್. ಮಂಜುನಾಥ್ ಅವರ ಹೆಸರನ್ನು ಮತ್ತೊಮ್ಮೆ ಶಿಫಾರಸು ಮಾಡಬೇಕೇ ಬೇಡವೇ ಎಂಬುದರ ಬಗ್ಗೆ ಸಚಿವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದಕ್ಕೆ ವಿಶೇಷ ಅರ್ಥ ಇಲ್ಲ. ಇದು ಮಾಮೂಲು ಶಿಷ್ಟಾಚಾರದ ಭೇಟಿ. ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಶುಭಾಶಯ ಕೋರಲು ಬಂದಿರುವುದಗಿ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!