ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪ್ರಶಸ್ತಿ ವಾಪ್ಸಿ ಬೇಡ ಮತ್ತಷ್ಟು ಬರೆಯಿರಿ: ಉಮಾಶ್ರೀ

ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಖಂಡಿಸಿ ಪ್ರಶಸ್ತಿ ವಾಪಸು ಮಾಡುತ್ತಿರುವ ಸಾಹಿತಿಗಳು ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕಿದೆ. ಪ್ರಶಸ್ತಿ ವಾಪಸು ಮಾಡುವ ಬದಲು ಮತ್ತಷ್ಟು ಬರೆದು ಜನರಲ್ಲಿ ಜಾಗೃತಿ ಮೂಡಿಸುವಂತಾಗಲಿ...

ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಖಂಡಿಸಿ ಪ್ರಶಸ್ತಿ ವಾಪಸು ಮಾಡುತ್ತಿರುವ ಸಾಹಿತಿಗಳು ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕಿದೆ. ಪ್ರಶಸ್ತಿ ವಾಪಸು ಮಾಡುವ ಬದಲು ಮತ್ತಷ್ಟು ಬರೆದು ಜನರಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಮನವಿ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಗೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶಸ್ತಿ ವಾಪಾಸು ಮಾಡಿ ಪ್ರತಿಭಟನೆ ಮಾಡೋದು ಬೇಡ. ತಮ್ಮ ಲೇಖನಿ ಮೂಲಕವೇ ಜಾಗೃತಿ ಮೂಡಿಸೋ ಕೆಲಸವನ್ನು ಸಾಹಿತಿಗಳು ಮಾಡಬೇಕು ಎಂದಿದ್ದಾರೆ. ಇನ್ನೊಂದೆಡೆ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ತೆಗೆದುಕೊಂಡ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಪ್ರತಿಭಟನೆ ಮಾಡೋದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ವಿಚಾರದಲ್ಲಿ ಶಾಸಕರ ಅಸಮಾಧಾನ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಶಾಸಕರ ಮನವಿಯನ್ನು ಪರಿಗಣಿಸಲಾಗಿದೆ. ಶಾಸಕರ ಸಲಹೆಯನ್ನು ಪರಿಗಣಿಸಿಲ್ಲ ಎಂಬ ಆರೋಪ ನಿರಾಧಾರ. ಎಲ್ಲಾ ಶಾಸಕರ ಸಲಹೆ ಪರಿಗಣನೆಯನ್ನೇ ತೆಗೆದುಕೊಂಡೇ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಕವಿ ಆಯ್ಕೆ ಪ್ರಕ್ರಿಯೆ ಸರ್ಕಾರ ಕೈ ಬಿಟ್ಟಿಲ್ಲ. ರಾಷ್ಟ್ರಕವಿ ಆಯ್ಕೆ ಸಮಿತಿ ನೀಡಿದ್ದ ವರದಿ ಆಧರಿಸಿ ಮತ್ತೊಮ್ಮೆ ಪರಿಶಿಲಿಸಿ ಮುಖ್ಯಮಂತ್ರಿ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾಡಗೀತೆಯನ್ನು ಕಡಿತಗೊಳಿಸುವ ಕುರಿತು ಸರ್ಕಾರ ಇನ್ನೂ ಸಾರ್ವಜನಿಕರ ಅಬಿsಪ್ರಾಯ ಪಡೆಯುತ್ತಿದೆ. ಶೀಘ್ರವೇ ಎಲ್ಲ ಅಬಿsಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ