ಭೂಮಿ ಕುಸಿದ ಪರಿಣಾಮ ಸುಮಾರು 20 ಅಡಿ ಆಳದ ಗುಂಡಿಗೆ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸುತ್ತಿರುವುದು... 
ಜಿಲ್ಲಾ ಸುದ್ದಿ

ನಿಂತ ನೆಲವೇ ಬಾಯ್ಬಿಟ್ಟು ನುಂಗಲು ಯತ್ನಿಸಿತು

ಮೊಬೈಲ್‍ನಲ್ಲಿ ಮಾತನಾಡುತ್ತ ನಿಂತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಭೂಕಂಪನದ ಅನುಭವ...

ಬೆಂಗಳೂರು: ಮೊಬೈಲ್‍ನಲ್ಲಿ ಮಾತನಾಡುತ್ತ ನಿಂತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಭೂಕಂಪನದ ಅನುಭವ! ಹೌದು. 
ನಗರದ ಸಿವಿಲ್ ಕೋರ್ಟ್ ಮುಂಭಾಗ ಬೈಕ್ ನಿಲ್ಲಿಸಿ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದ ವೇಳೆ ಭೂಮಿ ಕುಸಿದ ಪರಿಣಾಮ ಏತನ್ಮಧ್ಯೆ ವ್ಯಕ್ತಿಯೊಬ್ಬರು ಸುಮಾರು 20 ಅಡಿ ಆಳದ ಗುಂಡಿಗೆ ಬಿದ್ದಿದ್ದಾರೆ. 
ತಕ್ಷಣ ಪಕ್ಕದಲ್ಲೇ ಇದ್ದ ಜನರು ಧಾವಿಸಿ ಬಂದು ಗುಂಡಿಯಿಂದ ಮೇಲೆತ್ತಿದ್ದು, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಗುಂಡಿಗೆ ಬಿದ್ದಿರುವ ವ್ಯಕ್ತಿಯನ್ನು ಚಾಮರಾಜಪೇಟೆ ನಿವಾಸಿ ನಂದಕುಮಾರ್ ಎಂದು ತಿಳಿದುಬಂದಿದೆ. ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 
ಕೋರ್ಟ್ ಮುಂಭಾಗ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ ಸುತ್ತಮುತ್ತಲ ಪ್ರದೇಶ ಜಾಗ ಸಡಿಲಗೊಂಡಿದೆ. ಅಲ್ಲದೆ ಕಳೆದ ಮೂರು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿರುವುದು ಭೂಮಿ ಮತ್ತಷ್ಟು ಕುಸಿದಿರುವುದು ಸಹ ಘಟನೆ ಜರುಗಲು ಕಾರಣವಾಗಿದೆ. 
ಈ ಸಂಬಂಧ ಬಿಎಂಆರ್‍ಸಿಎಲ್ ವಿರುದ್ಧ ಆರ್‍ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!