ಸಂಸದ ಸುರೇಶ್ ಅಂಗಡಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮಹದಾಯಿ: ೧೯ರಿಂದ ಬೆಂಗಳೂರಲ್ಲಿ ಸಭೆ

ಉತ್ತರ ಕರ್ನಾಟಕ ಜನತೆಯ ಪ್ರಮುಖ ಬೇಡಿಕೆಯಾದ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನ. ೧೯ ಮತ್ತು ೨೦ ರಂದು ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳ...

ಬೆಳಗಾವಿ: ಉತ್ತರ ಕರ್ನಾಟಕ ಜನತೆಯ ಪ್ರಮುಖ ಬೇಡಿಕೆಯಾದ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನ. ೧೯ ಮತ್ತು ೨೦ ರಂದು ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಸಂಸದ ಸುರೇಶ ಅಂಗಡಿ ಹೇಳಿದರು.

ಶುಕ್ರವಾರ ಇಲ್ಲಿ ನಡೆದ ಕಳಸಾ-ಬಂಡೂರಿ ಹೋರಾಟಗಾರರ ಮತ್ತು ಜನಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದಿನ ಸಭೆಯಲ್ಲಿ ಸಂಸತ್ ಹಾಗೂ ವಿಧಾನಮಂಡಲ  ಅಧಿವೇಶನದಲ್ಲಿ ಮಹದಾಯಿ ಬಗ್ಗೆ ಧನಿ ಎತ್ತಲು ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲಾಗುವುದು. ಜೊತೆಗೆ ಹೋರಾಟದ ರೂಪುರೇಷಗಳ ಬಗ್ಗೆ ಚರ್ಚಿಸಲಾಗುವುದು ಎಂದರು. ಮಹದಾಯಿ  ಜಾರಿಗೆ ಉತ್ತರ ಕರ್ನಾಟಕದಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಅಧಿವೇಶನದ ಒಳಗಾಗಿ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ಮಾಡಬೇಕು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು. ಮಹಾಂತೇಶ ಕವಟಗಿಮಠ, ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!