(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನಕಲಿ ಆರ್‍ಟಿಒ ಅಧಿಕಾರಿಯ ಬಂಧನ

ಇತ್ತೀಚೆಗಷ್ಟೇ ಆದಾಯ ತೆರಿಗೆ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದ ಪೊಲೀಸರಿಗೆ ಈಗ ಸಾರಿಗೆ ಇಲಾಖೆ ಅಧಿಕಾರಿ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ...

ಬೆಂಗಳೂರು: ಇತ್ತೀಚೆಗಷ್ಟೇ ಆದಾಯ ತೆರಿಗೆ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದ ಪೊಲೀಸರಿಗೆ ಈಗ ಸಾರಿಗೆ ಇಲಾಖೆ ಅಧಿಕಾರಿ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಲಗ್ಗೆರೆ ಚೌಡೇಶ್ವರಿನಗರದ ನಿವಾಸಿ ರವಿಕುಮಾರ್(30) ಎಂಬಾತನೇ ಸಾರಿಗೆ ಇಲಾಖೆ ಅಧಿಕಾರಿ ಹೆಸರಿನಲ್ಲಿ ಸಾರ್ವಜನಿಕರಿಂದ ಸುಲಿಗೆಗೆ ಇಳಿದಿದ್ದು ಕೃತ್ಯ ಆರಂಬಿsಸಿದ ಮೂರೇ ದಿನಗಳಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿಯಿಂದ ರು.700 ನಗದು, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೆಸರಿನ ನಕಲಿ ಗುರುತಿನ ಚೀಟಿ, ಮೊಬೈಲ್ ಫೋನ್, 3 ಸಿಮ್ ಕಾರ್ಡ್‍ಗಳು ಹಾಗೂ ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಮಕೂರು ಜಿಲ್ಲೆ ಅಂದನಕೆರೆ ಗ್ರಾಮದ ರವಿ, ಟೆಂಪೋ ಟ್ರಾವೆಲ್ಲರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಾರಿಗೆ ಇಲಾಖೆ ಅಧಿಕಾರಿಗಳು ರಸ್ತೆಗಳಲ್ಲಿ ಅಲ್ಲಲ್ಲಿ ವಾಹನಗಳ ದಾಖಲೆ ಪರಿಶೀಲನೆ ಮಾಡುವುದರಿಂದ ಪ್ರೇರಿತನಾದ ಆರೋಪಿ, ತಾನು ಕೂಡ ಆರ್‍ಟಿಒ ಅಧಿಕಾರಿ ಸೋಗಿನಲ್ಲಿ ಅಕ್ರಮ ಹಣ ಸಂಪಾದನೆ ಮಾಡಲು ಮುಂದಾಗಿದ್ದ.

ಭಯ ಹುಟ್ಟಿಸಿ ಸುಲಿಗೆ: ಸುಮನಹಳ್ಳಿ ರಿಂಗ್ ರಸ್ತೆಯಲ್ಲಿ ನಿಂತು ತಾನು ಯಶವಂತಪುರ ಆರ್‍ಟಿಒ ಕಚೇರಿಯ ಆರ್ ಟಿಒ ಸ್ಕ್ವಾಡ್ ಆಫೀಸರ್ ಎಂದು ಹೇಳಿಕೊಂಡು ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲಿಸುತ್ತಿದ್ದ. ದಾಖಲೆಗಳನ್ನು ಹೊಂದಿರದ ವಾಹನಗಳನ್ನು ಜಪ್ತಿ ಮಾಡುವುದಾಗಿ ಬೆದರಿಸಿ, ಹಣಕ್ಕೆ ಬೇಡಿಕೆ ಇಡುತ್ತಿದ್ದ. ವಾಹನ ಸವಾರರು, ಚಾಲಕರು ಹಣ ಕೊಡಲು ನಿರಾಕರಿಸಿದರೆ ರಸ್ತೆಯಲ್ಲಿ ಮುಂದೆ ಸಾರಿಗೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ನಿಮ್ಮ ವಾಹನದ ಫೋಟೋ ತೆಗೆದಿದ್ದು, ಅದನ್ನು ಅಧಿಕಾರಿಗಳಿಗೆ ವಾಟ್ಸ್ ಅಪ್ ಮಾಡುತ್ತೇನೆ ಎಂದು ಚಾಲಕರಲ್ಲಿ ಮತ್ತಷ್ಟು ಭಯ ಹುಟ್ಟಿಸಿ ಹಣ ಸುಲಿಯುತ್ತಿದ್ದ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ.

ಫೈರ್‍ಮನ್ ಗುರುತಿನ ಚೀಟಿ: ಆರೋಪಿ ರವಿಕುಮಾರ್ ಕರ್ನಾಟಕ ಸ್ಟೇಟ್ ಫೈರ್ ಸರ್ವಿಸ್‍ನಲ್ಲಿ ಫೈರ್‍ಮನ್ ಆಗಿರುವ ತನ್ನ ಸ್ನೇಹಿತ ಎಂ.ಎಸ್. ಮಂಜುನಾಥನ ಗುರುತಿನ ಚೀಟಿಯ ನಕಲಿ ಪ್ರತಿ ಇಟ್ಟುಕೊಂಡು ವಾಹನ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ. ವಾಹನ ತಪಾಸಣೆ ಸಂದರ್ಭದಲ್ಲಿ ಯಾರಾದರೂ ಗುರುತಿನ ಚೀಟಿ ಕೇಳಿದಾಗ ಬೆರಳಿನಿಂದ ಗುರುತಿನ ಚೀಟಿಯ ಫೋಟೋ ಮುಚ್ಚಿ ಯಾಮಾರಿಸುತ್ತಿದ್ದ. ಅಕ್ರಮವಾಗಿ ಹಣ ಗಳಿಸುವ ಹುಮ್ಮಸ್ಸಿನಲ್ಲಿ ಆರ್‍ಟಿಒ ಅಧಿಕಾರಿ ವೇಷ ತೊಟ್ಟ ಆರೋಪಿ ರವಿಕುಮಾರ್ ಕೃತ್ಯ ಆರಂಭಿಸಿದ ಮೂರೇ ದಿನಗಳಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

ತಪಾಸಣೆ ಬಗ್ಗೆ ಅನುಮಾನಗೊಂಡು ಅನಿಲ್ ಎಂಬುವರು ನ.12ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದರು. ಈ ಸಂಬಂಧ ಕಾರ್ಯ ಪ್ರವೃತ್ತರಾದ ಪೊಲೀಸರು ರವಿಕುಮಾರ್‍ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ