ಪ್ರತಾಪ್ ಸಿಂಹ 
ಜಿಲ್ಲಾ ಸುದ್ದಿ

ಪ್ರತಾಪ ರಾಜಿನಾಮೆಗೆ ಒತ್ತಾಯ

ಟಿಪ್ಪು ಸುಲ್ತಾನ್ ಮತ್ತು ಕುರುಬ ಜಾತಿ ಬಗ್ಗೆ ಅವಹೇಳನಕರವಾಗಿ ಮಾತನಾಡಿರುವ ಮೈಸೂರು-ಕೊಡಗು...

ಬೆಂಗಳೂರು: ಟಿಪ್ಪು ಸುಲ್ತಾನ್ ಮತ್ತು ಕುರುಬ ಜಾತಿ ಬಗ್ಗೆ ಅವಹೇಳನಕರವಾಗಿ ಮಾತನಾಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಒತ್ತಾಯಿಸಿದೆ.
ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಟಿಪ್ಪು ಜಯಂತಿ ಆಚರಣೆ ಮಾಡುವ ಸರ್ಕಾರದ ಕ್ರಮವನ್ನು ವಿರೋಧಿಸುವ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ `ಟಿಪ್ಪು ಕುರುಬರನ್ನು ಹತ್ಯೆ ಮಾಡಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡುತ್ತಿರಲಿಲ್ಲ' ಎಂದು ಹೇಳುವ ಮೂಲಕ ಹಿಂದುಳಿದ ವರ್ಗಕ್ಕೆ ಸೇರಿರುವ ಕುರುಬ ಜಾತಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
ಸಂಸದ ಪ್ರತಾಪ ಸಿಂಹ ರಾಜಿನಾಮೆಗೆ ಒತ್ತಾಯಿಸಿ ನ.18ರಂದು ನಗರದ ಆನಂದ ರಾವ್ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!